ನವದೆಹಲಿ: ಭಾನುವಾರ ಲೂಧಿಯಾನದಲ್ಲಿ ನಡೆದ ವರ್ಚುವಲ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಪಕ್ಷದ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರು.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಂಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
#AawazPunjabDi कांग्रेस दे नाल।
हुण कांग्रेस सारे मसले करूगी हल चन्नी दे नाल।। pic.twitter.com/FSBMFuW1wm— Congress (@INCIndia) February 6, 2022
ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ ನಂತರ,“ಎಲ್ಲರಿಗೂ ಧನ್ಯವಾದಗಳು.ಇದು ನಾನು ಒಬ್ಬಂಟಿಯಾಗಿ ಹೋರಾಡಲು ಸಾಧ್ಯವಾಗದ ದೊಡ್ಡ ಯುದ್ಧ.ನನ್ನಲ್ಲಿ ಹಣವಿಲ್ಲ, ಹೋರಾಡಲು ಧೈರ್ಯವಿಲ್ಲ ಪಂಜಾಬ್ನ ಜನರು ಈ ಯುದ್ಧದಲ್ಲಿ ಹೋರಾಡುತ್ತಾರೆ ಎಂದು ಹೇಳಿದರು.
पंजाब की जनता ने कांग्रेस पार्टी के CM चेहरे के रूप में चरणजीत सिंह चन्नी जी को चुना है।
मैं इससे सहमत हूँ।
हम मिलकर एक बेहतर और खुशहाल पंजाब बनाएँगे।#AawazPunjabDi pic.twitter.com/K13unY12Zy
— Rahul Gandhi (@RahulGandhi) February 6, 2022
"ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು.ಕಳೆದ 111 ದಿನಗಳಲ್ಲಿ ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ನಾವು ಶ್ರಮಿಸುತ್ತಿರುವುದನ್ನು ನೀವು ನೋಡಿದಂತೆ, ಹೊಸ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಪಂಜಾಬ್ ಮತ್ತು ಪಂಜಾಬಿಗಳನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು ನಾನು ನಿಮಗೆ ಭರವಸೆ ನೀಡುತ್ತೇನೆ" ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.