ನವದೆಹಲಿ: ಬಿಜೆಪಿ ಪಕ್ಷದಿಂದ ಶೋಷಣೆಗೆ ಒಳಗಾದವರ ಪರವಾಗಿ ನಿಂತು ಹೋರಾಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಸಂಸತ್ತಿನ ಅನೆಕ್ಸ್ ಸಭಾಂಗಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಾಂಗ್ರೆಸ್ 'ಭಾರತದ ಧ್ವನಿ' (ವಾಯ್ಸ್ ಆಫ್ ಇಂಡಿಯಾ). ದೇಶದ ಭೂತ, ವರ್ತಮಾನ ಹಾಗೂ ಭವಿಷ್ಯದ ನಡುವಿನ ಸೇತುವೆಯಾಗಿ ಕಾಂಗ್ರೆಸ್ ಕಾರ್ಯನಿರ್ವಹಿಸುತ್ತಿದೆ. ದೇಶದ ಅಭಿವೃದ್ಧಿಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವಕ್ಕೆ ಅಪಾಯ: ಸೋನಿಯಾ ಗಾಂಧಿ
ಬೂತ್ ಮಟ್ಟದಿಂದ ಮತದಾರರನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ. ಪ್ರತಿ ಕ್ಷೇತ್ರದಲ್ಲಿ ನಮ್ಮ ಪಕ್ಷಕ್ಕೆ ಮತ ಹಾಕದವರನ್ನು ಗುರುತಿಸಿ, ಅವರ ವಿಶ್ವಾಸವನ್ನು ಮರಳಿ ಗಳಿಸಲು ಹೊಸ ತಂತ್ರ ರೂಪಿಸಬೇಕಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಅಲ್ಲದೆ, ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾವಣಾ ಪೂರ್ವ ಮತ್ತು ಚುನಾವಣಾ ನಂತರದ ಮೈತ್ರಿ ಸಂಬಂಧ ಯಾವುದೇ ನಿರ್ಧಾರಗಳನ್ನು ರಾಹುಲ್ ಗಾಂಧಿ ಕೈಗೊಳ್ಳಲು ಸಮಿತಿ ಅನುಮೋದನೆ ನೀಡಿದೆ ಎನ್ನಲಾಗಿದೆ.
ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ; ಸಿದ್ದರಾಮಯ್ಯ ಭಾಗಿ
ಸಭೆಯಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ , ದಿಗ್ವಿಜಯ್ ಸಿಂಗ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.