ಆರ್ಥಿಕ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ

ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ಕಾಂಗ್ರೆಸ್ ನವೆಂಬರ್ 5-15 ರಿಂದ ಪ್ರತಿಭಟನೆ ನಡೆಸಲಿದೆ.  ಕಾಂಗ್ರೆಸ್ ನವೆಂಬರ್ 1-8 ರವರೆಗೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ಪಕ್ಷದ ಹಿರಿಯ ಮುಖಂಡರು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Last Updated : Oct 30, 2019, 03:40 PM IST
ಆರ್ಥಿಕ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ title=
File image

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ವಿದೇಶಕ್ಕೆ ತೆರಳಿದ್ದು, ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪಕ್ಷದ ಯೋಜಿತ ಪ್ರತಿಭಟನೆಗಳಿಗೆ ಕೆಲವೇ ದಿನಗಳು ಬಾಕಿ ಇರುವಾಗ ಈ ಪ್ರಯಾಣ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಸುಮಾರು ಒಂದು ವಾರ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಮರಳಲಿದ್ದು, ನಂತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನವೆಂಬರ್ 1 ಮತ್ತು 8 ರ ನಡುವೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ನವೆಂಬರ್ 5 ರಿಂದ 15 ರವರೆಗೆ ಪ್ರತಿಭಟನೆ ನಡೆಸಲಿದೆ. ಪಕ್ಷದ ಹಿರಿಯ ನಾಯಕರು ನವೆಂಬರ್ 5 ರಿಂದ 15 ರವರೆಗೆ ದೇಶಾದ್ಯಂತ ಪ್ರತಿ ಜಿಲ್ಲಾ ಮಟ್ಟದಲ್ಲಿ ತಯಾರಿ ನಡೆದಿದೆ. ಪಕ್ಷದ ಹಲವು ಹಿರಿಯ ಮುಖಂಡರುಗಳು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ದೊಡ್ಡ ಪ್ರತಿಭಟನೆಯನ್ನೂ ಯೋಜಿಸಲಾಗುತ್ತಿದೆ. ಈ ಪ್ರತಿಭಟನೆಗೆ ಇತರ ವಿರೋಧ ಪಕ್ಷಗಳನ್ನೂ ಕೂಡ ಆಹ್ವಾನಿಸಲಾಗಿದೆ. 

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಕ್ಟೋಬರ್ 23 ರಂದು ಜಿಲ್ಲೆಗಳಲ್ಲಿ ಮತ್ತು ರಾಜ್ಯ ರಾಜಧಾನಿಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದು, ಇದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದ ಪರಾಕಾಷ್ಠೆಯಾಗಲಿದೆ.

ಸೆಪ್ಟೆಂಬರ್ 12/13 ರಂದು ಹಿರಿಯ ನಾಯಕರು, ಪಕ್ಷದ ಪದಾಧಿಕಾರಿಗಳು ಮತ್ತು ಉಸ್ತುವಾರಿಗಳು, ಕಾಂಗ್ರೆಸ್ ಸಿಎಂಗಳು ಮತ್ತು ಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್ಪಿ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂಬುದು ಗಮನಾರ್ಹವಾಗಿದೆ. 

Trending News