ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷರಾಗಿ ರಾಹುಲ್ ಗಾಂಧಿಯನ್ನು ನೇಮಿಸುವಂತೆ ಭಾರತೀಯ ಯುವ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.ಸೋನಿಯಾ ಗಾಂಧಿ ಪ್ರಸ್ತುತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ಟ್ವಿಟರ್‌ನಲ್ಲಿ ನಿರ್ಣಯದ ಪ್ರತಿಯನ್ನು ಹಂಚಿಕೊಂಡಿದ್ದಾರೆ ಮತ್ತು "ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಐವೈಸಿ ಜಂಟಿಯಾಗಿ ರಾಹುಲ್ ಗಾಂಧಿಯನ್ನು ನೇಮಕ ಮಾಡುವ ನಿರ್ಣಯವನ್ನು ಅಂಗೀಕರಿಸುತ್ತದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಂವಿಧಾನದ ಪ್ರಕಾರ ರಾಹುಲ್ ಗಾಂಧಿ (Rahul Gandhi) ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು" ಎಂದು ಅಂಗೀಕಾರ ನಿರ್ಣಯದಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ತಮ್ಮ ಸತತ ವಿದೇಶ ಪ್ರವಾಸದ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಲಿ- ಬಿಜೆಪಿ
ಗೋವಾದ ಪಣಜಿ ಬಳಿಯ ರೆಸಾರ್ಟ್ ನಲ್ಲಿ ನಡೆದ ಐವೈಸಿ ಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನ ಈ ನಿರ್ಣಯವನ್ನು ಅಂಗೀಕರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಐವೈಸಿ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ, ಐವೈಸಿ ಉಸ್ತುವಾರಿ ಮತ್ತು ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವರು ವಹಿಸಿದ್ದರು.
At the National Executive meeting of the Indian Youth Congress, IYC Jointly passes a resolution that Shri @RahulGandhi Ji should be appointed as AICC President as per the constitution of Indian National Congress. pic.twitter.com/c5wxDm6wM7
— Srinivas BV (@srinivasiyc) September 6, 2021
'ಮುಂಬರುವ ದಿನಗಳಲ್ಲಿ, ಯುವ ಕಾಂಗ್ರೆಸ್ ದೇಶದ ಹಿತದೃಷ್ಟಿಯಿಂದ ಎಲ್ಲಾ ಜ್ವಲಂತ ಸಮಸ್ಯೆಗಳ ಬಗ್ಗೆ ಬೀದಿಗಿಳಿದು ಹೋರಾಡುತ್ತದೆ ಮತ್ತು ಈ ಹೋರಾಟವನ್ನು ಜನರ ಬಳಿಗೆ ಕೊಂಡೊಯ್ಯಲಿದೆ" ಎಂದು ಶ್ರೀನಿವಾಸ್ ಬಿವಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2017 ರಲ್ಲಿ ಸೋನಿಯಾ ಗಾಂಧಿಯವರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಹುಲ್ ಗಾಂಧಿ, 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ನಂತರ ಆ ಸ್ಥಾನವನ್ನು ತೊರೆದರು. ಮತ್ತು ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ, ಗಾಂಧಿಯೇತರರು ಕಾಂಗ್ರೆಸ್ ಅನ್ನು ಮುನ್ನಡೆಸಬೇಕು ಎಂದು ಹೇಳಿದ್ದರು.
ಇದನ್ನೂ ಓದಿ: ಆರ್ಥಿಕ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿಯ ರಾಜೀನಾಮೆಯು ವಾರಗಳವರೆಗೆ ಕಾಂಗ್ರೆಸ್‌ನಲ್ಲಿ ಕೋಲಾಹಲವನ್ನು ಉಂಟುಮಾಡಿತು,ಆಗ ಅವರ ಮನಸ್ಸು ಬದಲಾಯಿಸಲು ಪ್ರಯತ್ನಿಸಿದರು ಅದು ಸಾಧ್ಯವಾಗಲಿಲ್ಲ.ಇದಾದ ನಂತರ ಸೋನಿಯಾ ಗಾಂಧೀ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.