ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್’ಗಢದಲ್ಲಿ ಕಾಂಗ್ರೆಸ್ ಹೀನಾಯ ಸೋಲು: ಈ ಜನಾದೇಶದ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

Congress Leader Rahul Gandhi: ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಜನರ ಆಯ್ಕೆಯಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ದಾರೆಂದು ತಿಳಿಯೋಣ.

Written by - Bhavishya Shetty | Last Updated : Dec 3, 2023, 10:17 PM IST
    • ಮಿಜೋರಾಂ ಹೊರತುಪಡಿಸಿ ಉಳಿದ 4 ರಾಜ್ಯಗಳ ಫಲಿತಾಂಶ ಇಂದು ಪ್ರಕಟ
    • ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್’ಗೆ ಹೀನಾಯ ಸೋಲು
    • ಫಲಿತಾಂಶಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್’ಗಢದಲ್ಲಿ ಕಾಂಗ್ರೆಸ್ ಹೀನಾಯ ಸೋಲು: ಈ ಜನಾದೇಶದ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು? title=
Rahul Gandhi

Congress Leader Rahul Gandhi: ಈ ವರ್ಷ ನವೆಂಬರ್ ತಿಂಗಳಿನಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌’ಗಢ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಿಜೋರಾಂ ಹೊರತುಪಡಿಸಿ ಉಳಿದ 4 ರಾಜ್ಯಗಳ ಫಲಿತಾಂಶ ಇಂದು ಪ್ರಕಟವಾಗಿದೆ. ತೆಲಂಗಾಣ ಹೊರತುಪಡಿಸಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌’ಗಢದ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ವಿರುದ್ಧವಾಗಿವೆ.

ಇದನ್ನೂ ಓದಿ: ‘ಅನಿಮಲ್’ ಸಿನಿಮಾದಲ್ಲಿ ನಟಿಸಲು ನಟಿ ರಶ್ಮಿಕಾ ಮಂದಣ್ಣ ಪಡೆದಿದ್ದು ಇಷ್ಟು ಕೋಟಿ ಸಂಭಾವನೆ…!

ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಜನರ ಆಯ್ಕೆಯಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ದಾರೆಂದು ತಿಳಿಯೋಣ.

ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ತೆಲಂಗಾಣ ಜನತೆಗೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ, “ಜನಪರ ತೆಲಂಗಾಣ ರಚಿಸುವ ಭರವಸೆಯನ್ನು ಖಂಡಿತ ಈಡೇರಿಸುತ್ತೇವೆ ಹಾಗೂ ಎಲ್ಲಾ ಕಾರ್ಯಕರ್ತರ ಶ್ರಮ ಮತ್ತು ಬೆಂಬಲಕ್ಕಾಗಿ ಧನ್ಯವಾದ” ಎಂದಿದ್ದಾರೆ. 4 ರಾಜ್ಯಗಳ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಬಹುಮತದ ಗಡಿ ದಾಟಲು ಸಾಧ್ಯವಾಯಿತು.

ತೆಲಂಗಾಣದಲ್ಲಿ ಎರಡು ದಶಕಗಳ ಕಾಲ ಅಧಿಕಾರದಲ್ಲಿದ್ದ ಭಾರತ ರಾಷ್ಟ್ರ ಸಮಿತಿಯನ್ನು (ಬಿಆರ್‌’ಎಸ್) ಸೋಲಿಸುವ ಮೂಲಕ ಕಾಂಗ್ರೆಸ್ ಗೆಲುವು ಸಾಧಿಸಿದೆ. 119 ಸ್ಥಾನಗಳೊಂದಿಗೆ ಬಹುಮತ ಸಾಧಿಸಿದ ಕಾಂಗ್ರೆಸ್, ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಯನ್ನು ಕೆಳಗಿಳಿಸಿದೆ.

ಇದನ್ನೂ ಓದಿ: ವಾರದಲ್ಲಿ 3 ಬಾರಿ ಪೇರಳೆ ಜ್ಯೂಸ್ ಕುಡಿಯಿರಿ: ಈ ಕಾಯಿಲೆಗಳಿಂದ ಪಡೆಯಿರಿ ಶಾಶ್ವತ ಮುಕ್ತಿ

2013 ರಲ್ಲಿ ತೆಲಂಗಾಣ ರಚನೆಯಾಯಿತು. ಅಂದಿನಿಂದ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರ್ಕಾರವಿದ್ದು, ಕೆಸಿಆರ್ ಅವರೇ ಸಿಎಂ ಆಗಿ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು ಎಂಬುದು ಗಮನಾರ್ಹ. ತೆಲಂಗಾಣದಲ್ಲಿ ಗೆಲುವಿಗಾಗಿ ರಾಹುಲ್ ಗಾಂಧಿ ಅಲ್ಲಿನ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News