ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ನಿರ್ಧಾರ...?

ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಸಿಪಿಐನ ಹತ್ತಿರದ ಅಭ್ಯರ್ಥಿ ಅನ್ನಿ ರಾಜಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಕ್ಷೇತ್ರದ ಚುನಾವಣೆ ಮುಗಿಯುವವರೆಗೂ ಅಮೇಥಿ ಅಥವಾ ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮೌನವಹಿಸಿತ್ತು.

Written by - Manjunath N | Last Updated : Jun 8, 2024, 06:06 PM IST
  • ಕಾಂಗ್ರೆಸ್ ನ ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲು ಶನಿವಾರ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.
  • ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ
  • ರಾಹುಲ್ ಗಾಂಧಿ ಅತ್ಯುತ್ತಮ ನಾಯಕರಾಗಿದ್ದು, ಲೋಕಸಭೆಯಲ್ಲಿ ಉತ್ತಮ ರೀತಿಯಲ್ಲಿ ಪ್ರತಿಪಕ್ಷಗಳ ಧ್ವನಿ ಎತ್ತಬಲ್ಲರು ಎಂದರು.
ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ನಿರ್ಧಾರ...? title=

ನವದೆಹಲಿ: 2019 ರಲ್ಲಿ ವಯನಾಡ್ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಮರುಜನ್ಮ ಪಡೆದಿದ್ದ ರಾಹುಲ್ ಗಾಂಧಿ ಈಗ ಈ ಕ್ಷೇತ್ರವನ್ನು ತೊರೆದು ರಾಯ್ ಬರೇಲಿ ಕ್ಷೇತ್ರದ ಸಂಸದ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ರಾಹುಲ್ ಗಾಂಧಿ ಶೀಘ್ರದಲ್ಲೇ ಕೇರಳದ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದಾದ ನಂತರ ಅವರು ರಾಯ್ ಬರೇಲಿಯ ಸಂಸದರಾಗಿ ಉಳಿಯಲಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಯುಪಿಯ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಗೆದ್ದಿರುವುದರಿಂದ ನಿಯಮಗಳ ಪ್ರಕಾರ ಎರಡರಲ್ಲಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಇದನ್ನೂ ಓದಿ: ಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನ 

ರಾಹುಲ್ ರಾಜೀನಾಮೆ ಕೊಟ್ಟರೆ ಯಾರಿಗೆ ಅವಕಾಶ?

ಒಂದು ವೇಳೆ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅಥವಾ ತಮ್ಮ ನಿಕಟವರ್ತಿ ಬೆಂಬಲಿಗರನ್ನು ಅಲ್ಲಿಂದ ಕಣಕ್ಕೆ ಇಳಿಸಬಹುದು ಎನ್ನಲಾಗಿದೆ.ಈಗ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದೆ.ಅಷ್ಟೇ ಅಲ್ಲದೆ ಈ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ತಪ್ಪು ಸಂದೇಶ ಹೋಗದ ಹಾಗೆ ಅದೇ ರೀತಿ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಭಾವವೂ ಕೂಡ ಕಡಿಮೆಯಾಗಬಾರದು. ಈ ಎಲ್ಲ ಲೆಕ್ಕಾಚಾರದೊಂದಿಗೆ ವಯನಾಡಿನಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕಾಗಿದೆ.ಹಾಗಾಗಿ ಈ ಕ್ಷೇತ್ರದಲ್ಲಿ ಟಿಕೆಟ್ ಪಡೆಯುವ ಅದೃಷ್ಟ ಯಾರಿಗೆ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಸಿಪಿಐನ ಹತ್ತಿರದ ಅಭ್ಯರ್ಥಿ ಅನ್ನಿ ರಾಜಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಕ್ಷೇತ್ರದ ಚುನಾವಣೆ ಮುಗಿಯುವವರೆಗೂ ಅಮೇಥಿ ಅಥವಾ ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮೌನವಹಿಸಿತ್ತು.ಆದರೆ ಈ ಕ್ಷೇತ್ರದ ಚುನಾವಣೆ ಮುಗಿದ ಹಲವು ದಿನಗಳ ನಂತರ ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತು. ಅಮೇಥಿ ಕ್ಷೇತ್ರದಿಂದ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಲಾಯಿತು.

3-4 ದಿನಗಳಲ್ಲಿ ವಯನಾಡ್ ಕ್ಷೇತ್ರದ ಬಗ್ಗೆ ನಿರ್ಧಾರ?

ಕಾಂಗ್ರೆಸ್ ನ ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲು ಶನಿವಾರ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಪಕ್ಷದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅತ್ಯುತ್ತಮ ನಾಯಕರಾಗಿದ್ದು, ಲೋಕಸಭೆಯಲ್ಲಿ ಉತ್ತಮ ರೀತಿಯಲ್ಲಿ ಪ್ರತಿಪಕ್ಷಗಳ ಧ್ವನಿ ಎತ್ತಬಲ್ಲರು ಎಂದರು. ವಯನಾಡ್ ಕ್ಷೇತ್ರವನ್ನು ತೊರೆಯುವ ಪ್ರಶ್ನೆಗೆ ವೇಣುಗೋಪಾಲ್, ರಾಹುಲ್ ಗಾಂಧಿ ಅವರು ಯಾವ ಸ್ಥಾನವನ್ನು ಬಿಡುತ್ತಾರೆ ಎಂಬ ಬಗ್ಗೆ 3-4 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. 

ಇದನ್ನೂ ಓದಿ: ಲೋಕ ಸಮರ ಫಲಿತಾಂಶ ಎಫೆಕ್ಟ್: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಲಿತ-ಲಿಂಗಾಯತ ನಾಯಕರ ಒತ್ತಡ?!

ಸೋಲಿನ ಪರಾಮರ್ಶೆಗೆ ಕಾಂಗ್ರೆಸ್ ಸಮಿತಿ ರಚನೆ

ಕಾಂಗ್ರೆಸ್ ಸೋತ ರಾಜ್ಯಗಳ ಪರಿಶೀಲನೆಗೆ ಪಕ್ಷ ಸಮಿತಿ ರಚಿಸಲಿದೆ.ಈ ಸಮಿತಿ ವರದಿ ಬಂದ ನಂತರ ನಾಯಕರು ಹಾಗೂ ರಾಜ್ಯಾಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೇಣುಗೋಪಾಲ್ ತಿಳಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಸರ್ವಾಧಿಕಾರಿ ರಾಜಕಾರಣವನ್ನು ದೇಶದ ಜನತೆ ತಿರಸ್ಕರಿಸಿದ್ದಾರೆ. ಇದು ಮೋದಿ ಸರ್ಕಾರದ ವಿರುದ್ಧ ಸ್ಪಷ್ಟ ಜನಾದೇಶ. ಈ ಸರ್ಕಾರದ ದಿನಗಳು ಮುಗಿದಿದ್ದು, ಸಾರ್ವಜನಿಕರು ಇದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News