Rahul Gandhi defamation case : ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹ ಗೊಳಿಸಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸಿದೆ.
ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.