Job Alert: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2.98 ಲಕ್ಷ ಹುದ್ದೆಗಳಿಗೆ ಶೀಘ್ರ ನೇಮಕಾತಿ!

2019ರ ಜೂನ್ 1ರಿಂದ ರೈಲ್ವೆ ಇಲಾಖೆಯಲ್ಲಿ 2.93 ಲಕ್ಷ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಪೀಯುಶ್ ಗೋಯಲ್ ತಿಳಿಸಿದ್ದಾರೆ.

Last Updated : Jul 11, 2019, 12:17 PM IST
Job Alert: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2.98 ಲಕ್ಷ ಹುದ್ದೆಗಳಿಗೆ ಶೀಘ್ರ ನೇಮಕಾತಿ! title=

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಖಾಲಿಯಿರುವ 2.98 ಲಕ್ಷ ಹುದ್ದೆಗಳಿಗೆ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪೀಯುಶ್ ಗೋಯಲ್ ಹೇಳಿದ್ದಾರೆ. 

ಲೋಕಸಭೆಯಲ್ಲಿ ಬುಧವಾರ ಈ ಬಗ್ಗೆ ತಿಳಿಸಿದ ಅವರು, 2019ರ ಜೂನ್ 1ರಿಂದ ರೈಲ್ವೆ ಇಲಾಖೆಯಲ್ಲಿ 2.93 ಲಕ್ಷ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು. ಕಳೆದ 10 ವರ್ಷಗಳಲ್ಲಿ 4.61 ಲಕ್ಷ ಮಂದಿಗೆ ರೈಲ್ವೆಯಲ್ಲಿ ಉದ್ಯೋಗ ಕಲ್ಪಿಸಲಾಗಿದೆ ಎಂದು ತಿಳಿಸಿದರು.

1991 ರಲ್ಲಿ ರೈಲ್ವೆ ನೌಕರರ ಸಂಖ್ಯೆ ಒಟ್ಟು 16,54985 ಇತ್ತು, ಆದರೀಗ 2019 ರಲ್ಲಿ 12, 48101 ಆಗಿದೆ. ನೌಕರರ ಸಂಖ್ಯೆ ನಾಲ್ಕು ಲಕ್ಷ ಕಡಿಮೆಯಾಗಿದೆ. ಇದರ ಹೊರತಾಗಿಯೂ ರೈಲ್ವೆ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಸದ್ಯ ಎ, ಬಿ, ಸಿ ಮತ್ತು ಡಿ ದರ್ಜೆಗಳಲ್ಲಿ ಸುಮಾರು 2,98,574 ಹುದ್ದೆಗಳು ಖಾಲಿಯಿವೆ ಎಂದು ಪೀಯುಶ್ ಹೇಳಿದ್ದಾರೆ.

ಕಳೆದ ಹಣಕಾಸು ವರ್ಷದಲ್ಲಿ (2018-19) ಖಾಲಿ ಇರುವ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆ ನಡೆಸಲಾಗಿದೆ. ಈ ಹಣಕಾಸು ವರ್ಷದಲ್ಲಿ ಉಳಿದ 1.4 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. 

Trending News