2022ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರೈಲು ಸಂಪರ್ಕ: ಪಿಯೂಶ್ ಗೋಯಲ್

2022ರ ಆಗಸ್ಟ್ 15 ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿಗೆ ಶೀಘ್ರದಲ್ಲೇ ಭಾರತೀಯ ರೈಲ್ವೆ ದೇಶವನ್ನು ಸಂಪರ್ಕಿಸುತ್ತದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ ಕೆಲಸ ಸ್ಥಗಿತಗೊಂಡಿತ್ತು ಎಂದು ಪಿಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.

Last Updated : Oct 3, 2019, 02:07 PM IST
2022ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರೈಲು ಸಂಪರ್ಕ: ಪಿಯೂಶ್ ಗೋಯಲ್ title=

ನವದೆಹಲಿ: 2022ರ ಆಗಸ್ಟ್ 15 ರೊಳಗೆ ಭಾರತೀಯ ರೈಲ್ವೆಯು ಕಾಶ್ಮೀರದಿಂದ ಕನ್ಯಾಕುಮಾರಿಗೆ ದೇಶವನ್ನು ಸಂಪರ್ಕಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.

ನವದೆಹಲಿ-ಕತ್ರಾ ನಡುವೆ ಸಂಚರಿಸುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕತ್ರಾದಿಂದ ಬನಿಹಾರ್ ವರೆಗಿನ ರೈಲ್ವೆ ಸಂಪರ್ಕವನ್ನು ಶೀಘ್ರಗತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಚೆನಾಡ್ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 2022ರ ಆಗಸ್ಟ್ 15 ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿಗೆ ಶೀಘ್ರದಲ್ಲೇ ಭಾರತೀಯ ರೈಲ್ವೆ ದೇಶವನ್ನು ಸಂಪರ್ಕಿಸುತ್ತದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ ಕೆಲಸ ಸ್ಥಗಿತಗೊಂಡಿತ್ತು" ಎಂದು ಗೋಯಲ್ ಹೇಳಿದರು.

370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಶ್ಲಾಘಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಅನುಗುಣವಾಗಿ, ಅಮಿತ್ ಶಾ ಅವರು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ, ರೈಲುಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿನ ಸುರಕ್ಷತೆಗೆ ಗೃಹ ಸಚಿವರು ಒತ್ತು ನೀಡಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದೇವೆ. 5,000 ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಸುಮಾರು 6,500 ನಿಲ್ದಾಣಗಳಲ್ಲಿ ಈ ಸೌಲಭ್ಯ ಒದಗಿಸಲಾಗುವುದು ಎಂದು ರೈಲ್ವೆ ಸಚಿವರು ವಿವರಿಸಿದರು.

Trending News