ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರುಣನ ಸಿಂಚನ!

ಮಳೆಯಿಂದಾಗಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Last Updated : Jun 27, 2018, 10:46 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರುಣನ ಸಿಂಚನ! title=

ನವದೆಹಲಿ: ರಾಷ್ಟ್ರೀಯ ರಾಜಧಾನಿ ಪ್ರದೇಶದ ದೆಹಲಿ ಮತ್ತು ಇತರ ಕೆಲವು ಭಾಗಗಳಲ್ಲಿ ಬುಧವಾರ ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದೆ. ಮಳೆಯಿಂದಾಗಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇಂದು ದಿನವಿಡೀ ಮೋಡ ಕವಿದ ವಾತವರನದೊಂಡಿದೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ 8.30ರಲ್ಲಿ ಶೇ.55 ಆರ್ದ್ರತೆ ದಾಖಲಾಗಿದೆ. ಗರಿಷ್ಟ ಉಷ್ಣತೆ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಮಂಗಳವಾರ ಗರಿಷ್ಠ ತಾಪಮಾನ 34.2 ಡಿಗ್ರಿ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

Trending News