ಆತ್ಮಹತ್ಯೆಗೆ ಶರಣಾದ ರೈತರ ಎಲ್ಲಾ ಸಾಲ ಮನ್ನಾ?

ರಾಜಸ್ಥಾನದಲ್ಲಿ ಆತ್ಮಹತ್ಯೆಗೆ ಶರಣಾದ ಎಲ್ಲಾ ರೈತರ ಸಾಲ ಮನ್ನಾ ಮಾಡಲು ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದೆ.

Last Updated : Jan 7, 2019, 12:34 PM IST
ಆತ್ಮಹತ್ಯೆಗೆ ಶರಣಾದ ರೈತರ ಎಲ್ಲಾ ಸಾಲ ಮನ್ನಾ? title=

ನವದೆಹಲಿ: ರಾಜಸ್ಥಾನದಲ್ಲಿ 2014 ರಿಂದ 2018ರ ನಡುವೆ ಆತ್ಮಹತ್ಯೆಗೆ ಶರಣಾದ ಎಲ್ಲಾ ರೈತರ ಎಲ್ಲಾ ರೀತಿಯ ಸಾಲಗಳನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಲು ಬೆಳೆ ಸಾಲ ಮನ್ನಾ ಸಾಧ್ಯತೆ ಪರಿಶೀಲನೆಗಾಗಿ ರಚಿಸಲಾಗಿರುವ ಸಮಿತಿಯು ತೀರ್ಮಾನಿಸಿದೆ. 

ರಾಜಸ್ಥಾನದಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 70 ರೈತರು ಆತಮ್ಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಅಥವಾ ಯಾವುದೇ ಇತರ ಉದ್ದೇಶಗಳಿಗೆ ಅವರು ಪಡೆದ ಎಲ್ಲಾ ಸಾಲವನ್ನೂ ಮನ್ನಾ ಮಾಡಬೇಕೆಂದು ಸರ್ಕಾರಕ್ಕೆ ತಿಳಿಸುವುದಾಗಿ ಶನಿವಾರ ನಡೆದ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಸಚಿವ ಶಾಂತಿ ಧಾರಿಬಾಲ್ ಹೇಳಿದ್ದಾರೆ.

ಸಹಕಾರಿ ಬ್ಯಾಂಕುಗಳಿಂದ ರೈತರು ಪಡೆದಿರುವ ಅಲ್ಪಾವಧಿ ಕೃಷಿ ಸಾಲ ಮತ್ತು ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳಿಂದ ಪಡೆದ ರೂ. 2 ಲಕ್ಷದಷ್ಟು ಸಾಲವನ್ನು ಮನ್ನಾ ಮಾಡುವುದಾಗಿ ಡಿಸೆಂಬರ್ 19ರಂದು ಸರ್ಕಾರ ರಚನೆ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದರು. ಬಳಿಕ ಕೃಷಿ ಸಾಲ ಮನ್ನಾ ಮಾಡುವ ವಿಧಾನಗಳನ್ನು ನಿರ್ಧರಿಸಲು ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ಮುಂದಿನ ಸಭೆ ಜನವರಿ 11ರಂದು ನಡೆಯಲಿದೆ. 

Trending News