ವಿಧಾನಸಭಾ ಚುನಾವಣೆ 2018; ರಾಜಸ್ಥಾನ, ತೆಲಂಗಾಣದಲ್ಲಿ ಇಂದು ಮತದಾನ

ರಾಜಸ್ಥಾನದಲ್ಲಿ ಒಟ್ಟು 199 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಅದೇ ಸಮಯದಲ್ಲಿ, ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು ಹೊಸ ರಾಜ್ಯವಾಗಿ ರಚನೆಯಾದ ಬಳಿಕ ತೆಲಂಗಾಣದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.

Last Updated : Dec 7, 2018, 07:44 AM IST
ವಿಧಾನಸಭಾ ಚುನಾವಣೆ 2018; ರಾಜಸ್ಥಾನ, ತೆಲಂಗಾಣದಲ್ಲಿ ಇಂದು ಮತದಾನ title=

ಜೈಪುರ/ಹೈದರಾಬಾದ್:  ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹಳ ಕುತೂಹಲ ಕೆರಳಿಸಿರುವ ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಇಂದು ಮತದಾನ ನಡೆಯಲಿದೆ. ಇಂದು  ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯುತ್ತದೆ.

ಮತದಾನಕ್ಕಾಗಿ ಚುನಾವಣಾ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಕಠಿಣ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ರಾಜಸ್ಥಾನದಲ್ಲಿ ಒಟ್ಟು 199 ವಿಧಾನಸಭಾ ಕ್ಷೇತ್ರಗಳಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು ಹೊಸ ರಾಜ್ಯವಾಗಿ ರಚನೆಯಾದ ಬಳಿಕ ತೆಲಂಗಾಣದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದ್ದು ಇದನ್ನು 2019 ರ ಲೋಕಸಭಾ ಚುನಾವಣೆ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತಿದೆ.

ರಾಜಸ್ಥಾನ ಚುನಾವಣೆ: 
ರಾಜಸ್ಥಾನವು ಇಂಡೋ-ಪಾಕ್ ಅಂತರರಾಷ್ಟ್ರೀಯ ಗಡಿಪ್ರದೇಶದ ಪಕ್ಕದಲ್ಲಿರುವುದರಿಂದ ಈ ರಾಜ್ಯದಲ್ಲಿ ಸೂಕ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ 20 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸುತ್ತಿದ್ದಾರೆ. ಮತದಾನಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಇವಿಎಂ-ವಿವಿಪ್ಯಾಟ್ಗಳನ್ನು ಬಳಸಲಾಗುವುದು ಮತ್ತು ವಿವಿಪತ್ ಯಂತ್ರಗಳನ್ನು ಮೊದಲ ಬಾರಿಗೆ ಇವಿಎಂಗಳ ಜೊತೆಗೆ ಬಳಸಲಾಗುತ್ತಿದೆ. ರಾಜ್ಯದಲ್ಲಿ ಸ್ವತಂತ್ರ, ಪಕ್ಷಪಾತವಿಲ್ಲದ ಮತ್ತು ಶಾಂತಿಯುತ ಚುನಾವಣೆಯನ್ನು ಪೂರ್ಣಗೊಳಿಸಲು ಎಲ್ಲ ಸಿದ್ಧತೆಗಳು ಸಿದ್ಧವಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿ ಆನಂದ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನ್ಯಾಯಯುತ ಮತ್ತು ಶಾಂತಿಯುತ ರೀತಿಯಲ್ಲಿ ಮತದಾನ ನಡೆಸುವ ಸಲುವಾಗಿ 1,44,941 ಸಿಬ್ಬಂದಿಗಳನ್ನು ನೇಮಿಸಲಾಗಿದೆ. 

ಒಟ್ಟು 4,74,37,761 ಮತದಾರರು 199 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಚಲಾಯಿಸಲಿದ್ದು, ಅದರಲ್ಲಿ 2,47,22,365 ಪುರುಷರು ಮತ್ತು 2,27,15,396 ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರ ಸಂಖ್ಯೆ 20,20,156 ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ 199 ವಿಧಾನಸಭೆ ಕ್ಷೇತ್ರಗಳ ಒಟ್ಟು 2,274 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ 194, ಭಾರತೀಯ ಜನತಾ ಪಕ್ಷದಿಂದ 199 ಅಭ್ಯರ್ಥಿಗಳು, ಬಹುಜನ ಸಮಾಜ ಪಕ್ಷದಿಂದ 189, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಿಂದ 01, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದಿಂದ 16, ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಾರ್ಟಿಯಿಂದ 28 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜೊತೆಗೆ 830 ಸ್ವತಂತ್ರ ಅಭ್ಯರ್ಥಿಗಳೂ ಕೂಡ ಕಣದಲ್ಲಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳಿದ್ದು, ಒಂದು ಕ್ಷೇತ್ರದಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.  ಅಲವಾರ್ ಜಿಲ್ಲೆಯ ರಾಮ್ಗಢ ವಿಧಾನಸಭೆ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಸಿಂಗ್ ನವೆಂಬರ್ 29 ರಂದು ನಿಧನರಾದರು. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. 

ಇನ್ನು ರಾಜ್ಯದಲ್ಲಿ ಮತದಾನಕ್ಕಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಮಹಿಳೆಯರಿಗೆ 259 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 

ತೆಲಂಗಾಣ ಚುನಾವಣೆ: 
ತೆಲಂಗಾಣ ವಿಧಾನಸಭೆ ಚುನಾವಣೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಇದು ಸವಾಲಿನ ಚುನಾವಣೆಯಾಗಿದೆ. ಏಕೆಂದರೆ 2014 ರಂತೆಯೇ ಈ ಪಕ್ಷವು ಈ ಬಾರಿಯು ಒಂಟಿಯಾಗಿ ಸ್ಪರ್ಧಿಸುತ್ತಿದೆ. ದಕ್ಷಿಣ ಭಾರತದ ರಾಜ್ಯದಲ್ಲಿ ಬೇರೂರಲು ಬಿಜೆಪಿ ಹವಣಿಸುತ್ತಿದೆ. ಈ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು 2019 ರ ಲೋಕಸಭಾ ಚುನಾವಣೆ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತಿದೆ. 
2014 ರಲ್ಲಿ ಬಿಜೆಪಿ ತೆಲಂಗಾಮ್ ಪಾರ್ಟಿಯಲ್ಲಿ (ಟಿಡಿಪಿ) ಸಹಭಾಗಿತ್ವದಲ್ಲಿ ಸ್ಪರ್ಧಿಸಿ ಒಟ್ಟು 119 ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ. ಉಪ್ಪಲ್, ಮುಶಿರಾಬಾದ್, ಅಂಬರ್ಪೇಟ್, ಗೊಶಾಮಾಹಲ್ ಮತ್ತು ಹೈದರಾಬಾದ್ನ ಎಲ್ಬಿ ನಾಗರ್ ಈ ಐದು ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್‌ಎಸ್ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟ ಏರ್ಪಟ್ಟಿದೆ.  ತೆಲಂಗಾಣದಲ್ಲಿ ಕಾಂಗ್ರೆಸ್‌ ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ಮತ್ತಷ್ಟು ಬಲ ಬಲಬಂದಂತಾಗಿದೆ.
 

Trending News