ಜನರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ನಾವೆಂದೂ ಹೇಳಿಲ್ಲ: ರಾಜನಾಥ್ ಸಿಂಗ್

2014 ರಲ್ಲಿ ಚುನಾವಣಾ ಪ್ರಚಾರದ ವೇಳೆ ಜನರಿಗೆ ತಮ್ಮ ಖಾತೆಯಲ್ಲಿ 15-15 ಲಕ್ಷ ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

Last Updated : Apr 9, 2019, 04:22 PM IST
ಜನರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ನಾವೆಂದೂ ಹೇಳಿಲ್ಲ: ರಾಜನಾಥ್ ಸಿಂಗ್ title=
Pic Courtesy: ANI

ನವದೆಹಲಿ: ನಮ್ಮ ಪಕ್ಷ ಜನರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಎಂದೂ ಹೇಳಿಲ್ಲ. ನಾವು ಕಪ್ಪು ಹಣದ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದ್ದೆವು. ಕಪ್ಪು ಹಣದ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ, ನಮ್ಮ ಸರ್ಕಾರವು ಕಪ್ಪುಹಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯನ್ನು ರೂಪಿಸಿದೆ ಎಂದು ಲೋಕಸಭಾ ಚುನಾವಣೆ 2019ರ ಬಿಜೆಪಿ ಪ್ರಣಾಳಿಕೆ(ಸಂಕಲ್ಪ ಪತ್ರ) ಸಮಿತಿ ಅಧ್ಯಕ್ಷ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಸುದ್ದಿ ಸಂಸ್ಥೆ ANI ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 

2014 ರಲ್ಲಿ ಚುನಾವಣಾ ಪ್ರಚಾರದ ವೇಳೆ ಜನರಿಗೆ ತಮ್ಮ ಖಾತೆಯಲ್ಲಿ 15 ಲಕ್ಷ ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು ಎಂದು ಹೇಳುತ್ತಾ, ಚುನಾವಣೆ ವೇಳೆ ವಿರೋಧ ಪಕ್ಷಗಳು ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಿವೆ ಎಂದು ರಾಜನಾಥ್ ಸಿಂಗ್ ಪ್ರತಿಪಕ್ಷಗಳ ವಿರುದ್ಧ ಹರಿಹೈದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ, ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬಿಜೆಪಿ ಮಾತನಾಡಿದೆ. ವಿದೇಶದಲ್ಲಿ ಹೂಡಿರುವ ಕಪ್ಪು ಹಣವನ್ನು ಮರಳಿ ತರಲಾಗುವುದು ಎಂದು ಬಿಜೆಪಿ ಸಾರ್ವಜನಿಕರಿಗೆ ಭರವಸೆ ನೀಡಿತ್ತು. 

ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಐಟಿ ಮತ್ತು ಇಡಿ ದಾಳಿ ಬಗೆಗೆ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಸರ್ಕಾರ ಬದಲಾದಂತೆ ಸರ್ಕಾರಿ ಅಧಿಕಾರಿಗಳ ಕಾರ್ಯವೈಖರಿ ಬದಲಾಗುತ್ತದೆ ಎನ್ನುವುದು ತಪ್ಪು. ಆದಾಯ ತೆರಿಗೆ ಇಲಾಖೆ, ಎನ್ಫೋರ್ಸ್ಮೆಂಟ್ ಡೈರೆಕ್ಟರೇಟ್ ದಾಳಿ ಮಾಡುವ ಸ್ವಾಯತ್ತತೆಯನ್ನು ಹೊಂದಿವೆ. ಚುನಾವಣಾ ನೀತಿ ಸಂಹಿತೆ ಇವುಗಳಿಗೆ ಅನ್ವಯಿಸುವುದಿಲ್ಲ. ಅಧಿಕಾರಿಗಳು ತಮಗೆ ಲಭಿಸಿರುವ ಮಾಹಿತಿಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ, ನಾವು ಅವರನ್ನು ತಡೆಯಲು ಹೇಗೆ ಸಾಧ್ಯ ಎಂದರು.
 

Trending News