ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ರಮೇಶ್ ಬಾಬು ಅವರನ್ನು ಹೆಚ್.ಡಿ.ದೇವೇಗೌಡರು ನೇಮಕ ಮಾಡಿದ್ದಾರೆ.

Last Updated : Aug 3, 2019, 12:09 PM IST
ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ title=

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಿ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಲೋಕಸಭಾ ಚುನಾವಣೆ 2019ರ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಡ್ಯಾನಿಶ್ ಅಲಿ ಅವರು ರಾಜೀನಾಮೆ ನೀಡಿದ ಬಳಿಕ ಈ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿರಲಿಲ್ಲ. ಇದೀಗ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ಹೆಚ್.ಡಿ.ದೇವೇಗೌಡರು ನೇಮಕ ಮಾಡಿದ್ದಾರೆ.

ಪಕ್ಷ ಸಂಘಟನೆ ಹಾಗೂ ಉಪಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆಗೆ ಮುಂದಾಗಿರುವ ದೇವೇಗೌಡರು ಗುರುವಾರ ನೇಮಕಾತಿ ಆದೇಶ ಹೊರಡಿಸಿದ್ದಾರೆ. ರಮೇಶ್ ಬಾಬು ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Trending News