ನವದೆಹಲಿ: ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮದ ಮುಖ್ಯಸ್ಥರ ಸ್ಥಾನಕ್ಕೆ ದಿವ್ಯ ಸ್ಪಂದನ (ರಮ್ಯಾ) ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಮ್ಯಾ ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿಯಲಿದ್ದು ಪಕ್ಷದಲ್ಲಿ ಅವರಿಗೆ ಬೇರೆ ಹುದ್ದೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ತಿಳಿಸಿಲ್ಲ.