ಮೋದಿ ಪ್ರಧಾನಿಯಾದ ಬಳಿಕ ದಲಿತ ಯುವತಿಯರ ಅತ್ಯಾಚಾರ-ಸಾವು ಹೆಚ್ಚಾಗಿದೆ: ಖರ್ಗೆ

ದೆಹಲಿಯಲ್ಲಿ ನಿರ್ಭಯಾ ಪ್ರಕರಣವಾದಾಗ ಎಲ್ಲರೂ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸಿದ್ದರು. ಆಗ ಇದ್ದವರು ಈಗ ಏಕೆ ಬಾಯಿ ಬಿಡುತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.  

Last Updated : Oct 1, 2020, 02:35 PM IST
  • ಮೇಲ್ವರ್ಗದವರು ದೌರ್ಜನ್ಯ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತಿಲ್ಲ.
  • ದೆಹಲಿಯಲ್ಲಿ ನಿರ್ಭಯಾ ಪ್ರಕರಣವಾದಾಗ ಎಲ್ಲರೂ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸಿದ್ದರು.
  • ಆಗ ಇದ್ದವರು ಈಗ ಏಕೆ ಬಾಯಿ ಬಿಡುತ್ತಿಲ್ಲ - ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ಮೋದಿ ಪ್ರಧಾನಿಯಾದ ಬಳಿಕ ದಲಿತ ಯುವತಿಯರ ಅತ್ಯಾಚಾರ-ಸಾವು ಹೆಚ್ಚಾಗಿದೆ: ಖರ್ಗೆ title=
File Image

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ‌, ಹಲ್ಲೆ ಮಾಡಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ (Narendra Modi) ಪ್ರಧಾನ ಮಂತ್ರಿ ಆದ ಬಳಿಕ ಇಂಥ ದುರ್ಘಟನೆಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮುತ್ಸದಿ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಪ್ರದೇಶದ (Uttar Pradesh) ಹತ್ರಾಸ್ ನಲ್ಲಿ ದಲಿತ ಸಮುದಾಯಕ್ಕೆ ಸೇರಿದ 19ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ ನಾಲಿಗೆ ಕತ್ತರಿಸಿದ್ದಾರೆ. ತಮ್ಮ ಬಗ್ಗೆ ಆಕೆ ಮಾತನಾಡಬಾರದು ಎಂಬ ಕಾರಣಕ್ಕೆ ನಾಲಿಗೆ ಕತ್ತರಿಸಿದ್ದಾರೆ. ಇಂಥ ಘಟನೆಗಳು ನರೇಂದ್ರ ಮೋದಿ ಪ್ರಧಾನಿ ಆದ ನಂತರ ಹೆಚ್ಚಾಗಿ ನಡೆಯುತ್ತಿವೆ ಎಂದರು.

ಎರಡು ವಾರದ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಉ.ಪ್ರದೇಶದ ಮಹಿಳೆ ಸಾವು

ಮೇಲ್ವರ್ಗದವರು ದೌರ್ಜನ್ಯ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ದೆಹಲಿಯಲ್ಲಿ ನಿರ್ಭಯಾ ಪ್ರಕರಣವಾದಾಗ ಎಲ್ಲರೂ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸಿದ್ದರು. ಆಗ ಇದ್ದವರು ಈಗ ಏಕೆ ಬಾಯಿ ಬಿಡುತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು, ದಲಿತ ಯುವತಿಯರನ್ನು ಅತ್ಯಾಚಾರ ಮಾಡಿ ಸಾಯಿಸುವ ಕೆಲಸ ಬಿಜೆಪಿ ಅಧಿಕಾರ ನಡೆಸುತ್ತಿರುವ ರಾಜ್ಯಗಳಲ್ಲೇ ಹೆಚ್ಚಾಗ್ತಿದೆ. ಈಗ ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಗಳ ಹಿನ್ನಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೈತಿಕ‌ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

Trending News