Red alert announced for many districts of Kerala : ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. IMD ಯ ಮುನ್ಸೂಚನೆಯ ಪ್ರಕಾರ, ರಾಜ್ಯವು ಬುಧವಾರ ಭಾರೀ ಮಳೆಯಾಗಲಿದ್ದು, . ತಿರುವನಂತಪುರಂ ಹಾಗೂ ಇತರ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿಯಿಂದ ಆರಂಭವಾದ ಮಳೆ ಬುಧವಾರ ಬೆಳಗ್ಗೆಯವರೆಗೂ ನಿಲ್ಲದೆ ಸುರಿದಿದೆ ಈ ಹಿನ್ನಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯಿಂದಾಗಿ ತಿರುವನಂತಪುರಂನ ತೈಕಾಡ್ ಮತ್ತು ಪೂಜಾಪ್ಪುರದಲ್ಲಿ ಮರಗಳು ಧರೆಗುರುಳಿವೆ. ರಸ್ತೆಯ ಮೇಲೆ ಬಿದ್ದ ಮರಗಳು ಸಂಚಾರಕ್ಕೆ ಅಡ್ಡಿಯಾಗಿದ್ದು, ನಂತರ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತೆಗೆದಿದ್ದಾರೆ.
ಇದನ್ನು ಓದಿ : Pushpa 2 Song : ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ಟೀಸರ್ ಪೋಸ್ಟರ್ ಬಿಡುಗಡೆ!
ಅಧಿಕಾರಿಗಳು ಬುಧವಾರ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಳೆಗಾಗಿ ರೆಡ್ ಅಲರ್ಟ್ ಮತ್ತು ಇತರ ಎಂಟು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ಉಳಿದ ನಾಲ್ಕು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಮಳೆಯ ಜೊತೆಗೆ ಕೇರಳದ ಕರಾವಳಿಯಲ್ಲಿ ಅಲೆಗಳು ಹೆಚ್ಚಾಗುವ ಮುನ್ಸೂಚನೆಯನ್ನು IMD ನೀಡಿದೆ. ಹೀಗಾಗಿ ಈ ಹಿಂದೆ ಘೋಷಿಸಿದ್ದ ಮೀನುಗಾರಿಕೆ ನಿಷೇಧ ಬುಧವಾರವೂ ಮುಂದುವರಿಯಲಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ
ಇದನ್ನು ಓದಿ : IPL 2024: RCB ಗೆದ್ದರೆ ಆ ʼಫೋಟೋʼ ಶೇರ್ ಮಾಡ್ತೀನಿ ಎಂದ ಯುವತಿ!
ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಮತ್ತು ಎರಟ್ಟುಪೆಟ್ಟಾ-ವಾಗಮೋನ್ ರಸ್ತೆಯಲ್ಲಿ ರಾತ್ರಿ ಪ್ರಯಾಣದ ನಿಷೇಧವನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತುರ್ತು ಉದ್ದೇಶಗಳಿಗಾಗಿ ರಾತ್ರಿಯಲ್ಲಿ ಈ ಪ್ರದೇಶಗಳಲ್ಲಿ ಪ್ರಯಾಣಿಸಬೇಕಾದ ಜನರು ಆಯಾ ಪೊಲೀಸ್ ಠಾಣೆಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ಕೊಟ್ಟಾಯಂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.