ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಪ್ರತಿಜ್ನಾವಿಧಿ ಬೋಧಿಸಿದರು.
ಹೈದರಾಬಾದ್‍ನ ವಿಶಾಲವಾದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಭಾರತದ ಅತ್ಯಂತ ಕಿರಿಯ ರಾಜ್ಯದ ಮೊದಲ ಕಾಂಗ್ರೆಸ್ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಇದನ್ನೂ ಓದಿ: ಶಿವಮೊಗ್ಗದ ವಿದ್ಯಾನಗರ ಫ್ಲೈಓವರ್ ಉದ್ಘಾಟನೆಗೆ ನಿತಿನ್ ಗಡ್ಕರಿ!
#WATCH | Telangana CM Revanth Reddy with his newly inducted cabinet in Hyderabad pic.twitter.com/g468C9rnJW
— ANI (@ANI) December 7, 2023
ಸಿಎಂ, ಡಿಸಿಎಂ ಜೊತೆಗೆ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಪೊನ್ನಂ ಪ್ರಭಾಕರ್, ಸುರೇಖಾ ಕೊಂಡ ಮತ್ತು ಅನಸೂಯಾ ಸೀತಕ್ಕ, ಉತ್ತಮ್ ಕುಮಾರ್ ರೆಡ್ಡಿ, ಸಿ.ದಾಮೋದರ್ ರಾಜನರಸಿಂಹ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಡಿ.ಶ್ರೀಧರ್ ಬಾಬು, ತುಮ್ಮಲ ನಾಗೇಶ್ವರ ರಾವ್ ಮತ್ತು ಜೂಪಲ್ಲಿ ಕೃಷ್ಣ ರಾವ್ ಸೇರಿದಂಎತ ಅನೇಕರು ತೆಲಂಗಾಣ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | New CM of Telangana Revanth Reddy and his family meet Congress Parliamentary Party Chairperson Sonia Gandhi, MP Rahul Gandhi and General Secretary Priyanka Gandhi Vadra after the swearing-in ceremony in Hyderabad. pic.twitter.com/h9SqUbHXZN
— ANI (@ANI) December 7, 2023
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ ವೇಳೆ ಉಪಸ್ಥಿತರಿದ್ದರು.
ಇದನ್ನೂ ಓದಿ: ಕೇಂದ್ರದಿಂದ ರೈತರಿಗೆ ಬರ ಪರಿಹಾರ: ಆರ್.ಅಶೋಕ್ ಹೇಳಿದ್ದೇನು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.