ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ; ನಾಳೆ ಮಹತ್ವದ ಒಪ್ಪಂದ ಸಾಧ್ಯತೆ

ಇಂದು ಸಂಜೆ ಪ್ರಧಾನಿ ನಿವಾಸದಲ್ಲಿ ವಾಡ್ಲಿಮಿರ್​ ಪುಟಿನ್​ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದರು.  

Last Updated : Oct 4, 2018, 09:16 PM IST
ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ; ನಾಳೆ ಮಹತ್ವದ ಒಪ್ಪಂದ ಸಾಧ್ಯತೆ title=

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಭಾರತಕ್ಕೆ ಆಗಮಿಸಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ವಾಗತಿಸಿದರು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಭಾರತ-ರಷ್ಯಾದ 19ನೇ ವಾರ್ಷಿಕ ಶೃಂಗ ಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ 2 ದಿನಗಳ ಕಾಲ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮಿಸಿದ್ದು, ಸಂಜೆ ಪ್ರಧಾನಿ ನಿವಾಸದಲ್ಲಿ ವಾಡ್ಲಿಮಿರ್​ ಪುಟಿನ್​ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದರು.  

ನಾಳೆ ನಡೆಯಲಿರುವ 19ನೇ ಭರ್ತ ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗ ಸಭೆಯಲ್ಲಿ 36,668 ಕೋಟಿ ರೂ. (5 ಬಿಲಿಯನ್ ಡಾಲರ್) ಮೊತ್ತದ ಎಸ್-400 ಟ್ರಯಂಫ್ ಕ್ಷಿಪಣಿ ಖರೀದಿ ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ ಹಾಕುವ ಸಾಧ್ಯತೆ ಇದೆ. ಒಂದು ವೇಳೆ ಈ ಒಪ್ಪಂದಕ್ಕೆ ಸಹಿ ಬಿದ್ದಿದ್ದೇ ಆದಲ್ಲಿ, ದೇಶದ ಸೇನೆ ಮತ್ತಷ್ಟು ಬಲಗೊಳ್ಳಲಿದೆ.

Trending News