Free Schemes : ಸರ್ಕಾರದ ಉಚಿತ ಯೋಜನೆಗಳಿಂದ ದೇಶದ 'ಆರ್ಥಿಕ ನಾಶ' : ಸುಪ್ರೀಂ ಕೋರ್ಟ್ 

ಚುನಾವಣೆಯಲ್ಲಿ ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್ 17 ರಂದು ನಡೆಸಲಾಗುವುದು ಎಂದು ತಿಳಿಸಿದೆ.

Written by - Channabasava A Kashinakunti | Last Updated : Aug 11, 2022, 02:53 PM IST
  • ದೇಶದಲ್ಲಿ ಹೆಚ್ಚುತ್ತಿರುವ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂ ಕಳವಳ
  • ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್
  • ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ
Free Schemes : ಸರ್ಕಾರದ ಉಚಿತ ಯೋಜನೆಗಳಿಂದ ದೇಶದ 'ಆರ್ಥಿಕ ನಾಶ' : ಸುಪ್ರೀಂ ಕೋರ್ಟ್  title=

Free schemes Supreme Court : ದೇಶದಲ್ಲಿ ಹೆಚ್ಚುತ್ತಿರುವ ಉಚಿತ  ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇಂದು ನಡೆದ ಮಹತ್ವದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಉಚಿತ ಯೋಜನೆಗಳು ದೇಶವನ್ನು ಆರ್ಥಿಕ ವಿನಾಶದತ್ತ ಕೊಂಡೊಯ್ಯುತ್ತಿವೆ ಎಂದು ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ (ಎಸ್‌ಸಿ) ಸಹ ಉಚಿತ ಯೋಜನೆಗಳಿಂದ ಯಾರೂ ಪ್ರಯೋಜನ ಪಡೆಯುತ್ತಿಲ್ಲ ಎಂದು ಹೇಳಿದೆ. ಚುನಾವಣೆಯಲ್ಲಿ ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್ 17 ರಂದು ನಡೆಸಲಾಗುವುದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ವಾದ

ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್, ಇಂತಹ ಉಚಿತ ಘೋಷಣೆಗಳನ್ನು ಮುಂದುವರಿಸಿದರೆ, ಈ ಪ್ರಕ್ರಿಯೆಯು ದೇಶವನ್ನು ಆರ್ಥಿಕ ವಿನಾಶದತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು. ಸರ್ಕಾರ ಈ ಬಗ್ಗೆ ಕಾನೂನು ತರುವವರೆಗೆ ನ್ಯಾಯಾಲಯ ಮಧ್ಯಪ್ರವೇಶಿಸಿ ಮಾರ್ಗಸೂಚಿಗಳನ್ನು ನಿರ್ಧರಿಸಬಹುದು ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಇದನ್ನೂ ಓದಿ : Jagdeep Dhankhar : ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್ ಧನಕರ್!

 ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಚುನಾವಣಾ ಆಯೋಗಕ್ಕೆ (ಇಸಿ) ಸುಪ್ರೀಂ ಕೋರ್ಟ್  ಛೀಮಾರಿ ಹಾಕಿದೆ, ನಾವು ಅಫಿಡವಿಟ್ ಪಡೆಯುವುದಿಲ್ಲ ಎಂದು ಹೇಳಿದೆ, ಆದರೆ ಅದೇ ಅಫಿಡವಿಟ್ ಅನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಯಲ್ಲಿ ಉಚಿತ ಯೋಜನೆಗಳ ಬಗ್ಗೆ ಉಚಿತ ರೇವಾರಿ ಸಂಸ್ಕೃತಿ ಎಂದು ಕರೆದಿದ್ದಾರೆ. ಹಾಗೆ, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಈ ಬಗ್ಗೆ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ಮನವಿಯಲ್ಲಿ, ಉಚಿತ ಯೋಜನೆಗಳು ದೇಶದ ಆರ್ಥಿಕತೆಗೆ ಹಾನಿಯನ್ನುಂಟುಮಾಡುತ್ತವೆ ಎಂದು ಹೇಳಲಾಗಿದೆ.

ಸಲಹೆಗಳನ್ನು ಕೇಳಿದ ಸುಪ್ರೀಂ ಕೋರ್ಟ್ 

ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ಪಕ್ಷಗಳಿಂದ ಸಲಹೆಗಳನ್ನು ಕೇಳಿದೆ. ಮತ್ತೊಂದೆಡೆ, ದೆಹಲಿಯಲ್ಲಿ ಅಧಿಕಾರದಲ್ಲಿರುವ 'ಎಎಪಿ' ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಕೂಡ ಸಲ್ಲಿಸಲಾಗಿದ್ದು, ಅದರಲ್ಲಿಯೂ ಪಕ್ಷವಾಗಬೇಕೆಂದು ಒತ್ತಾಯಿಸಲಾಗಿದೆ. ಇದೇ ವೇಳೆ ಆಮ್ ಆದ್ಮಿ ಪಕ್ಷದ ಪರವಾಗಿ ಸಮಾಜ ಕಲ್ಯಾಣ ಯೋಜನೆಗೂ ಉಚಿತ ಕೊಡುಗೆಗಳಿಗೂ ವ್ಯತ್ಯಾಸವಿದೆ ಎಂದು ವಾದಿಸಲಾಯಿತು. ಉಚಿತ ಕೊಡುಗೆಗಳನ್ನು ಘೋಷಿಸಿದ ಪಕ್ಷಗಳ ಮಾನ್ಯತೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ : ಕರೋನಾ ಹೆಚ್ಚಳ: ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಕಡ್ಡಾಯ

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News