ನವದೆಹಲಿ: ರಾಮಜನ್ಮಭೂಮಿ-ಬಾಬರಿ ಮಸಿದಿ ಸ್ಥಳ ವಿವಾದ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜಾನ್ ಗೊಗೊಯ್ ಸಂವಿಧಾನಿಕ ಪೀಠವನ್ನು ಪುನರ್ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ರಚಿಸಲಾಗಿರುವ ಪೀಠದಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರನ್ನು ಸೇರ್ಪಡೆ ಮಾಡಲಾಗಿದೆ. ಅಯೋಧ್ಯೆ ವಿವಾದದ ಮುಂದಿನ ವಿಚಾರಣೆ ಜನವರಿ 29ಕ್ಕೆ ನಡೆಯಲಿದೆ.
Chief Justice of India Ranjan Gogoi reconstitutes Ayodhya bench, Justice Ashok Bhushan and Justice Abdul Nazeer now included. The case will be heard on January 29. #SupremeCourt pic.twitter.com/7wuQz5O93s
— ANI (@ANI) January 25, 2019
ಅಯೋಧ್ಯೆ ವಿಚಾರಣೆಗಾಗಿ ಸಿಜೆಐ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್. ಎ. ಬೊಬ್ಡೆ, ಎನ್. ವಿ. ರಮಣ, ಯು.ಯು.ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವನ್ನು ಸುಪ್ರೀಂಕೋರ್ಟ್ ರಚನೆ ಮಾಡಿ, ಜನವರಿ 10ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ, ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಹೊರ ಬಂದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜನವರಿ 29ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಪೀಠವನ್ನು ಪುನರ್ರಚಿಸಲಾಗಿದೆ.
ಅಯೋಧ್ಯೆ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಉದಯ್ ಲಲಿತ್, ವಿಚಾರಣೆ ಜನವರಿ 29ಕ್ಕೆ
2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಅಖರ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸಾಕಷ್ಟು ಮೇಲ್ಮನವಿಗಳು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ಜನವರಿ 29ರಂದು ಸುಪ್ರೀಂ ಕೋರ್ಟ್ ನಡೆಸಲಿದೆ.