ಪತ್ರಕರ್ತ ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ರದ್ದತಿಗೆ ಸುಪ್ರೀಂ ನಕಾರ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಪತ್ರಕರ್ತ ತರುಣ್ ತೇಜ್‌ಪಾಲ್ ವಿರುದ್ಧದ ಆರೋಪಗಳನ್ನು ರದ್ದುಪಡಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 

Last Updated : Aug 19, 2019, 11:16 AM IST
ಪತ್ರಕರ್ತ ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ರದ್ದತಿಗೆ ಸುಪ್ರೀಂ ನಕಾರ title=

ನವದೆಹಲಿ: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಪತ್ರಕರ್ತ ತರುಣ್ ತೇಜ್‌ಪಾಲ್ ವಿರುದ್ಧದ ಆರೋಪಗಳನ್ನು ರದ್ದುಪಡಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಆರು ತಿಂಗಳ ಅವಧಿಯಲ್ಲಿ ಮುಕ್ತಾಯಗೊಳಿಸಲಾಗುವುದು ಎಂದು ಉನ್ನತ ನ್ಯಾಯಾಲಯ ಹೇಳಿದೆ.

2013 ರಲ್ಲಿ ನಿಯತಕಾಲಿಕೆಯ ಥಿಂಕ್ ಫೆಸ್ಟ್ ಕಾರ್ಯಕ್ರಮದ ಸಂದರ್ಭದಲ್ಲಿ ಗೋಜ್‌ನ ಪಂಚತಾರಾ ಹೋಟೆಲ್‌ನಲ್ಲಿ ಲಿಫ್ಟ್‌ನೊಳಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ತೇಜ್‌ಪಾಲ್‌ನ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅತ್ಯಾಚಾರ ಮತ್ತು ಅನುಚಿತ ವರ್ತನೆ ನಿಯಮಗಳಡಿಯಲ್ಲಿ ತೇಜ್‌ಪಾಲ್ ವಿರುದ್ಧ ಜಿಲ್ಲಾ ನ್ಯಾಯಾಲಯ ಪ್ರಕರಣಗಳನ್ನು ದಾಖಲಿಸಿತ್ತು.

ಐಪಿಸಿ ಸೆಕ್ಷನ್ 341, 342 , 350, 376 (ಅತ್ಯಾಚಾರ) ಮತ್ತು 354- (ಎ) ಮತ್ತು (ಬಿ)ಗಳಡಿಯಲ್ಲಿ ಪತ್ರಕರ್ತ ತೇಜ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿವೆ. ಈ ರೀತಿ ತಮ್ಮ ವಿರುದ್ಧ ಆರೋಪಗಳನ್ನು ಮಾಡುವುದನ್ನು ತಡೆಯಬೇಕೆಂದು ಈ ಹಿಂದೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ತೇಜ್‌ಪಾಲ್‌ ಅರ್ಜಿಯನ್ನು ವಜಾಗೊಳಿಸಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪತ್ರಕರ್ತ ತೇಜ್‌ಪಾಲ್ ಅವರನ್ನು ಗೋವಾ ಅಪರಾಧ ವಿಭಾಗವು 2013ರ ನವೆಂಬರ್ 30 ರಂದು ಬಂಧಿಸಿತ್ತು. ಸುಪ್ರೀಂ ಕೋರ್ಟ್ ಅವರಿಗೆ ಪರಿಹಾರ ನೀಡಿದ ಬಳಿಕ ಮೇ 2014 ರಿಂದ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
 

Trending News