ಪ್ರಪಾತಕ್ಕೆ ಉರುಳಿದ ಶಾಲಾ ಬಸ್; 17 ವಿದ್ಯಾರ್ಥಿಗಳಿಗೆ ಗಾಯ

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Last Updated : Jan 28, 2019, 11:55 AM IST
ಪ್ರಪಾತಕ್ಕೆ ಉರುಳಿದ ಶಾಲಾ ಬಸ್; 17 ವಿದ್ಯಾರ್ಥಿಗಳಿಗೆ ಗಾಯ title=
Photo Courtesy: ANI

ಗುಂಟೂರು: ಶಾಲಾ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಸುಮಾರು 17 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. 

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, 15 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಎಎನ್ಐ ವರದಿ ಮಾಡಿದೆ.

ಸದ್ಯ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರಿಕ್ಷಿಸಲಾಗಿದೆ.
 

Trending News