ಶೋಪಿಯಾನ್ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Shopian Encounter: ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.   

Written by - Yashaswini V | Last Updated : Oct 10, 2023, 08:07 AM IST
  • ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಎನ್‌ಕೌಂಟರ್ ಪ್ರಾರಂಭವಾಗಿದೆ.
  • ಈ ಎನ್‌ಕೌಂಟರ್‌ನಲ್ಲಿ ಇದುವರೆಗೂ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
  • ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ (ಟ್ವಿಟ್ಟರ್ನಲ್ಲಿ) ಪೋಸ್ಟ್ ಮಾಡಿದ್ದಾರೆ.
ಶೋಪಿಯಾನ್ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು  title=

Shopian Encounter: :ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದ್ದು ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಗಮನಾರ್ಹವೆಂದರೆ, ಈ ಇಬ್ಬರೂ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಾಗವಾಗಿದ್ದರು ಎಂದು ತಿಳಿದುಬಂದಿದೆ. 

ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಅಲ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ಪ್ರದೇಶದಲ್ಲಿ  ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. 

ಜಮ್ಮು ಮತ್ತು ಕಾಶ್ಮೀರದ  ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಎನ್‌ಕೌಂಟರ್ ಪ್ರಾರಂಭವಾಗಿದೆ. ಈ ಎನ್‌ಕೌಂಟರ್‌ನಲ್ಲಿ ಇದುವರೆಗೂ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ (ಟ್ವಿಟ್ಟರ್ನಲ್ಲಿ)  ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ- ಈ ಪ್ರದೇಶಗಳಲ್ಲಿ 48 ಗಂಟೆಗಳಲ್ಲಿ ಬಿಡದೆ ಸುರಿಯಲಿದೆ ಮಳೆ ! ಹವಾಮಾನ ಇಲಾಖೆ ಎಚ್ಚರಿಕೆ

ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾದ ಇಬ್ಬರೂ ಉಗ್ರರನ್ನು ಲಷ್ಕರ್-ಎ-ತೊಯ್ಬಾಗೆ ಸೇರಿದ ಮೊರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಬ್ರಾರ್ ಎಂದು ಗುರುತಿಸಲಾಗಿದೆ. ಜಾಜಿಮ್ ಫಾರೂಕ್ ಅಬ್ರಾರ್ 2023ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾದಿದ್ದನು ಎಂದು ತಿಳಿದುಬಂದಿದೆ. 

ಇದನ್ನೂ ಓದಿ- Daily GK Quiz: ಭಾರತದ ಯಾವ ರಾಜ್ಯವು ವಿಶ್ವದ ಅತಿದೊಡ್ಡ ಶಾಲೆಯನ್ನು ಹೊಂದಿದೆ?

ಇನ್ನೂ ಇಲ್ಲಿನ ನಾಗರೀಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾವಹಿಸುವ ನಿಟ್ಟಿನಲ್ಲಿ ಎನ್‌ಕೌಂಟರ್ ಸ್ಥಳದಿಂದ ದೂರವಿರುವಂತೆ ಭದ್ರತಾ ಪಡೆಗಳು ಸಾಮಾನ್ಯ ಜನರಿಗೆ ಮನವಿ ಮಾಡುತ್ತಿವೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಮಾಯಕ ನಾಗರಿಕರು, ನಿರಾಯುಧ ಪೊಲೀಸರು ಮತ್ತು ಹೊರಗಿನ ಕಾರ್ಮಿಕರನ್ನು ಗುರಿಯಾಗಿಸುವ ಮೂಲಕ, ಕಣಿವೆಯಲ್ಲಿ ಶಾಂತಿಯನ್ನು ತರಲು ಭಯೋತ್ಪಾದಕರು ನಮ್ಮ ಪ್ರಯತ್ನಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಶ್ಮೀರ ಪೊಲೀಸ್ ಐಜಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News