ತಮಿಳುನಾಡಿನಲ್ಲಿ ಭೀಕರ ಅಪಘಾತ; ಕರ್ನಾಟಕದ ಮೂವರು ಸೇರಿ 7 ಮಂದಿ ಸಾವು

ಶನಿವಾರ ತಡರಾತ್ರಿ ಖಾಸಗಿ ಬಸ್'ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

Last Updated : Sep 1, 2018, 01:18 PM IST
ತಮಿಳುನಾಡಿನಲ್ಲಿ ಭೀಕರ ಅಪಘಾತ; ಕರ್ನಾಟಕದ ಮೂವರು ಸೇರಿ 7 ಮಂದಿ ಸಾವು title=

ಸೇಲಂ: ತಮಿಳುನಾಡಿನ ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಖಾಸಗಿ ಬಸ್'ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಮೂವರು ಕರ್ನಾಟಕದವರು ಮತ್ತು ನಾಲ್ಕು ಮಂದಿ ಕೇರಳದವರು ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಂಗಳೂರಿನಿಂದ ತಿರುವೆಲ್ಲಾ ಗೆ ಮತ್ತು ಸೇಲಂನಿಂದ ಕೃಷ್ಣಗಿರಿ ಕಡೆಗೆ ಪ್ರಯಾಣಿಸುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕುಮಾರ ಮಂಗಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹಾಗೂ ಮತ್ತೆ ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆ ಅಪಘಾತ ಶನಿವಾರ ತಡರಾತ್ರಿ ಸಂಭವಿಸಿದ್ದು, ಸುರಮಂಗಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Trending News