ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಪೊಲೀಸ್​ ಕಾನ್ಸ್​ಟೇಬಲ್​ ಅರೆಸ್ಟ್

ಆರೋಪಿಯನ್ನು ಟಾರ್ಡಿಯೊ ಠಾಣೆಯಲ್ಲಿ ಕಾನ್​ಸ್ಟೇಬಲ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂಜಯ್​ ವಾಘಮೇರ್​ ಎಂದು ಗುರುತಿಸಲಾಗಿದೆ.

Last Updated : Jun 21, 2019, 06:08 PM IST
ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಪೊಲೀಸ್​ ಕಾನ್ಸ್​ಟೇಬಲ್​ ಅರೆಸ್ಟ್ title=

ಮುಂಬೈ: ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ 35 ವರ್ಷದ ಪೊಲೀಸ್​ ಕಾನ್ಸ್​ಟೇಬಲ್​ನನ್ನು ಗುರುವಾರ ವಡಾಲಾ ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಆತನ ವಿರುದ್ಧ ದೂರು ದಾಖಲಾಗಿದೆ.

ಆರೋಪಿ ಕಾನ್ಸ್​ಟೇಬಲ್ ಸೋಮವಾರ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಬಾಲಕಿಯು ಈ ವಿಚಾರವನ್ನು ತನ್ನ ಹಿರಿಯ ಸಹೋದರನಿಗೆ ತಿಳಿಸಿದ್ದು, ಬಳಿಕ ಆತ ಈ ವಿಚಾರವನ್ನು ತಾಯಿಗೆ ವಿವರಿಸಿದ್ದಾನೆ. ಈ ಬಗ್ಗೆ ಬಾಲಕಿಯ ಕುಟುಂಬದವರು ಬುಧವಾರ ವಡಾಲಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಟಾರ್ಡಿಯೊ ಠಾಣೆಯಲ್ಲಿ ಕಾನ್​ಸ್ಟೇಬಲ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂಜಯ್​ ವಾಘಮೇರ್​ ಎಂದು ಗುರುತಿಸಲಾಗಿದೆ. ಆತನನ್ನು ಗುರುವಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ ಎಂದು ಪೋಲಿಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Trending News