ಡೆಹ್ರಾಡೂನ್: ಕಾರು ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

ಬಾನ್ಪುರದಿಂದ ಟಿಯುನಿಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಬಾನ್ಪುರ ಗ್ರಾಮದ ಬಳಿ 600 ಅಡಿ ಆಳದ ಕಂದಕಕ್ಕೆ ಬಿದ್ದು ಅಪಘಾತ ಸಂಭವಿಸಿದೆ. 

Last Updated : Jun 17, 2019, 05:06 PM IST
ಡೆಹ್ರಾಡೂನ್: ಕಾರು ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು title=

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಸೋಮವಾರ ಸಂಭವಿಸಿದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.

ಬಾನ್ಪುರದಿಂದ ಟಿಯುನಿಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಬಾನ್ಪುರ ಗ್ರಾಮದ ಬಳಿ 600 ಅಡಿ ಆಳದ ಕಂದಕಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.

ಭಾನುವಾರ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಗ್ರೇಟರ್ ನೋಯ್ಡಾದ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಈ ದಾರುಣ ಘಟನೆ ನಡೆದಿದೆ.

Trending News