ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಆರು ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Last Updated : Oct 28, 2019, 05:23 PM IST
ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಆರು ಜನರಿಗೆ ಗಾಯ   title=
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರದ ಕರಣ್ ನಗರ ಪೊಲೀಸ್ ಠಾಣೆಯಲ್ಲಿ 'ಅಪರಿಚಿತ ಭಯೋತ್ಪಾದಕರು' ಗ್ರೆನೇಡ್ ಹಾರಿಸಿದ ಎರಡು ದಿನಗಳ ನಂತರ ಈ ದಾಳಿ ನಡೆದಿದ್ದು, ಆ ಮೂಲಕ ಆರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರಕ್ಕೆ ಕಳುಹಿಸಲಾಗಿದ್ದು, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎನ್ನಲಾಗಿದೆ.

ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಾಗ ಅರೆಸೈನಿಕ ಪಡೆಯ 144 ನೇ ಬೆಟಾಲಿಯನ್ ಪೊಲೀಸ್ ಠಾಣೆಯಲ್ಲಿ ಚೆಕ್‌ಪಾಯಿಂಟ್ ನಿರ್ವಹಿಸುತ್ತಿತ್ತು ಎಂದು ಸಿಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಗ್ರೆನೇಡ್ ಸ್ಫೋಟವು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತು, ಗುಂಡಿನ ದಾಳಿ ನಂತರ ವಿಶೇಷ ಪಡೆಗಳಿಂದ ಪ್ರತೀಕಾರ ತೀರಿಸಲ್ಪಟ್ಟಿತು ಎನ್ನಲಾಗಿದೆ.

Trending News