ತೆಲಂಗಾಣ: ಕರ್ನಾಟಕದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲಿಯೂ 6 ಗ್ಯಾರಂಟಿಗಳನ್ನು ಘೋಷಿಸಿದೆ.
ಹೈದರಾಬಾದ್ ಸಮೀಪದ ತುಕ್ಕುಡದಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿಯವರು ತೆಲಂಗಾಣದ ಜನರಿಗೆ 6 ಭರವಸೆಗಳನ್ನು ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನನ್ನ ಕನಸಾಗಿದೆ. ನಮ್ಮ ಸರ್ಕಾರ ಬಂದರೆ ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ನಾವು ಕೆಲವ ಮಾಡುತ್ತೇವೆ’ ಅಂತಾ ಹೇಳಿದರು.
ಇದನ್ನೂ ಓದಿ: ಬಗೆದಷ್ಟೂ ಬಯಲಾಗುತ್ತಿದೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ!
ತೆಲಂಗಾಣ ಜನತೆಯ ಆಶೋತ್ತರಗಳನ್ನು ಈಡೇರಿಸಲು ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂ.ಗಳ ಆರ್ಥಿಕ ನೆರವು, ಮಹಾಲಕ್ಷ್ಮಿ ಯೋಜನೆಯಡಿ 500 ರೂ.ಗೆ ಗ್ಯಾಸ್ ಸಿಲಿಂಡರ್, ರಾಜ್ಯದಾದ್ಯಂತ ಟಿಎಸ್‌ಆರ್‌ಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುವುದು. ನಾವು 6 ಗ್ಯಾರಂಟಿಗಳನ್ನು ಘೋಷಿಸುತ್ತೇವೆ ಮತ್ತು ಅವುಗಳಲ್ಲಿ ಪ್ರತಿಯೊಂದನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
#WATCH | Telangana: "Rs 2,500 per month financial assistance will be given to women in Telangana under the Mahalakshmi scheme, gas cylinders at Rs 500, and free travel for women in TSRC buses across the state, to fulfill the aspirations of the people of Telangana we are… pic.twitter.com/X1NP3keKCa
— ANI (@ANI) September 17, 2023
‘ನಮ್ಮ 2ನೇ ಗ್ಯಾರಂಟಿಯಾಗಿ ರೈತರು ಮತ್ತು ಗೇಣಿದಾರ ರೈತರಿಗೆ ವರ್ಷಕ್ಕೆ 15 ಸಾವಿರ ರೂ. ಮತ್ತು ಕೃಷಿ ಕೂಲಿಕಾರರಿಗೆ 12 ಸಾವಿರ ರೂ. ನೀಡುತ್ತೇವೆ. ರೈತರ ಕಲ್ಯಾಣವೇ ಕಾಂಗ್ರೆಸ್‍ನ ಗುರಿಯಾಗಿದೆ. ಕರ್ನಾಟಕದಂತೆಯೇ ತೆಲಂಗಾಣದಲ್ಲಿಯೂ ಗೃಹಜ್ಯೋತಿ ಯೋಜನೆಯ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ’ ಎಂದು ಅವರು ಘೋಷಿಸಿದರು.
ಇದನ್ನೂ ಓದಿ: ಹಿಂದೂತ್ವದ ಹೋರಾಟ ಮಾಡಿಕೊಂಡಿರುವವರೆಲ್ಲಾ ಬಿಜೆಪಿ ಕಾರ್ಯಕರ್ತರಲ್ಲ!
ಇಂದಿರಮ್ಮ ಇಲ್ಲು ಯೋಜನೆ ಮೂಲಕ ವಸತಿರಹಿತರಿಗೆ ಮನೆ ನಿವೇಶನ ಹಾಗೂ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ. ಇದು ಯುವ ನಾಯಕ ರಾಹುಲ್ ಗಾಂಧಿಯವರ ಭರವಸೆಯಾಗಿದ್ದು, ಜಾರಿಯಾಗುವುದು ನಿಶ್ಚಿತವೆಂದು ಕಾಂಗ್ರೆಸ್ ಹೇಳಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.