ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೋನಿಯಾ ಗಾಂಧಿ ಅವರದ್ದೇ ಸಾರಥ್ಯ ಎಂದ ಕಾರ್ಯಕಾರಿಣಿ ಸಭೆ

ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ.

Written by - Zee Kannada News Desk | Last Updated : Mar 13, 2022, 11:11 PM IST
  • ಪಕ್ಷದ (congress) ಕಾರ್ಯಕಾರಿ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೋನಿಯಾ ಗಾಂಧಿ ಅವರದ್ದೇ ಸಾರಥ್ಯ ಎಂದ ಕಾರ್ಯಕಾರಿಣಿ ಸಭೆ  title=
file photo

ನವದೆಹಲಿ: ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ.

'ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಅವರು ನಮ್ಮನ್ನು ಮುನ್ನಡೆಸುತ್ತಾರೆ ಮತ್ತು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಅವರ ನಾಯಕತ್ವದ ಮೇಲೆ ನಮಗೆಲ್ಲರಿಗೂ ನಂಬಿಕೆಯಿದೆ" ಎಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಎನ್‌ಐಗೆ ತಿಳಿಸಿದರು.

ಇದನ್ನೂ ಓದಿ: ನಾವು ಬಿಜೆಪಿ-ಆರ್‌ಎಸ್‌ಎಸ್‌ನ ಅಭಿಯಾನದ ವಿರುದ್ಧ ಸೈದ್ಧಾಂತಿಕವಾಗಿ ಹೋರಾಡಬೇಕು- ಸೋನಿಯಾ ಗಾಂಧಿ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯನ್ನು ನಡೆಸಿ 5 ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಚುನಾವಣಾ ಸೋಲು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

'ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.5 ರಾಜ್ಯಗಳ ಚುನಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಯಿತು.ನಾವು ವಿಷಯಗಳನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಮತ್ತು ಮುಂಬರುವ ಚುನಾವಣೆಗೆ ನಾವು ಹೇಗೆ ತಯಾರಿ ನಡೆಸಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಯಿತು ಎಂದು ಎಐಸಿಸಿ ಗೋವಾ ಉಸ್ತುವಾರಿಯಾಗಿರುವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: ಸೋನಿಯಾ & ರಾಹುಲ್ ಗಾಂಧಿ ನಾಯಕತ್ವದಲ್ಲಿ ನವಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಸಿದ್ದರಾಮಯ್ಯ

ಪಕ್ಷದ (congress) ಕಾರ್ಯಕಾರಿ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು. ಇದೇ ವೇಳೆ ನಾಯಕತ್ವವನ್ನು ಪ್ರಶ್ನಿಸಿರುವ ಮತ್ತು ಸಂಘಟನೆಯ ಕೂಲಂಕುಷ ಪರೀಕ್ಷೆಗೆ ಒತ್ತಡ ಹೇರಿರುವ ಜಿ-23 ಭಿನ್ನಮತೀಯ ನಾಯಕರು, ಪಕ್ಷದ ಆಂತರಿಕ ಚುನಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದರು ಎನ್ನಲಾಗಿದೆ.

ಏತನ್ಮಧ್ಯೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಗಾಂಧಿ ಕುಟುಂಬದ ಮೇಲೆ ನಂಬಿಕೆಯನ್ನು ಹೊಂದಿದ್ದು, ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷರಾಗಬೇಕು ಎಂದು ಹೇಳಿದರು ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News