ಜಮ್ಮು-ಕಾಶ್ಮೀರ: ಸೋಪೋರ್'ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ

ಸೋಪೋರ್ ಜಿಲ್ಲೆಯ ಡ್ರೂಸು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್ಕೌಂಟರ್.

Last Updated : Aug 3, 2018, 09:14 AM IST
ಜಮ್ಮು-ಕಾಶ್ಮೀರ: ಸೋಪೋರ್'ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ title=
Pic: ANI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪ್ರದೇಶದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವಿನ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. 

ಸೊಪೋರ್ ಜಿಲ್ಲೆಯ ಡ್ರೂಸು ಗ್ರಾಮದಲ್ಲಿ ಈ ಎನ್ಕೌಂಟರ್ ನಡೆದಿದ್ದು, ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವುದರ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಯ ತಂಡ ಪ್ರದೇಶದ ಸುತ್ತ ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದರು. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲೇ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ 179 ಬೆಟಾಲಿಯನ್ ಸಿಆರ್ಪಿಎಫ್, 29 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ವಿಶೇಷ ಪಡೆಗಳು ಸೇರಿವೆ.

Trending News