ಸೋಶಿಯಲ್ ಮೀಡಿಯಾದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಭರ್ಜರಿ ಪ್ರಚಾರ; ಘೋಷಣೆ ಏನ್ ಗೊತ್ತೆ?

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದ್ದರೆ, ಮತ್ತೊಂದೆಡೆ ಇತರ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ.

Last Updated : Jan 31, 2019, 05:52 PM IST
ಸೋಶಿಯಲ್ ಮೀಡಿಯಾದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಭರ್ಜರಿ ಪ್ರಚಾರ; ಘೋಷಣೆ ಏನ್ ಗೊತ್ತೆ? title=

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದ್ದರೆ, ಮತ್ತೊಂದೆಡೆ ಇತರ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ.

ಅಲ್ಲದೆ, ಲೋಕಸಭೆ ಚುನಾವಣೆಗೆ ಎಸ್ಪಿ-ಬಿಎಸ್ಪಿ ಮೈತ್ರಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಿಯಾಂಕ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕಿಳಿಸಿದೆ. ಹೀಗಾಗಿ ಎಸ್ಪಿ-ಬಿಎಸ್ಪಿ ಮೈತ್ರಿ ಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಆರಂಭಿಸಿವೆ.

ಮೈತ್ರಿ ಬಳಿಕ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷ ಸೋಶಿಯಲ್ ಮೀಡಿಯಾದಲ್ಲಿ ಚುನಾವಣಾ ಪ್ರಚಾರದ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ. ಸುಮಾರು 3.31 ನಿಮಿಷಗಳ ವೀಡಿಯೋವನ್ನು ತನ್ನ ಫೇಸ್ಬುಕ್ ಪೇಜ್'ನಲ್ಲಿ ಶೇರ್ ಮಾಡಿದೆ.  ಇದರಲ್ಲಿ ದಲಿತ-ಹಿಂದುಳಿದ ವರ್ಗದವರಿಗೆ ಅಖಿಲೇಶ್ ಯಾದವ್ ಸಂದೇಶ ನೀಡಿದ್ದಾರೆ. ಬಿಎಸ್ಪಿ ನಾಯಕಿ ಮಾಯಾವತಿ ಸಹ ತಮ್ಮ ಸಂದೇಶ ನೀಡಿದ್ದಾರೆ. "ಬನ್ನಿ, ಎಲ್ಲರೂ ಮತಬೇಧ ಮರೆಯೋಣ, ಯಾವ ವರ್ಗದ ಮೇಲೂ ಇನ್ನು ದೌರ್ಜನ್ಯಕ್ಕೆ ಅವಕಾಶವಿಲ್ಲ" ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಈ ವೀಡಿಯೋವನ್ನು 29 ಸಾವಿರ ಮಂದಿ ವೀಕ್ಷಿಸಿದ್ದು, 771 ಮಂದಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ, 2.3 ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

Trending News