ಈದ್ ನಮಾಜ್ ನಂತರ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ: ರಾಜಸ್ಥಾನದ ಜೋಧ್‌ಪುರದಲ್ಲಿ ಈದ್‌ಗೂ ಮುನ್ನ ಭುಗಿಲೆದ್ದ ಹಿಂಸಾಚಾರದ ನಂತರ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಈದ್ ಪ್ರಾರ್ಥನೆಯ ನಂತರ ಮಸೀದಿಯ ಹೊರಗೆ ಕಲ್ಲು ತೂರಾಟ ನಡೆದ ಇತ್ತೀಚಿನ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದರು ಎನ್ನಲಾಗಿದೆ.
ಮುಸುಕುಧಾರಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ:
ಅನಂತನಾಗ್ ಜಿಲ್ಲೆಯ ಮಸೀದಿಯೊಂದರ ಹೊರಗೆ ಈದ್ ಪ್ರಾರ್ಥನೆಯ ನಂತರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮುಸುಕುಧಾರಿ ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಳಿಕ ಪೊಲೀಸರು ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಪ್ರಧಾನಿ ಮೋದಿಯವರ ಸಲಹೆಗಾರರಾಗಿ ತರುಣ್ ಕಪೂರ್ ನೇಮಕ
ಜೋಧಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ:
ಮತ್ತೊಂದೆಡೆ, ರಾಜಸ್ಥಾನದ ಜೋಧ್‌ಪುರದಲ್ಲಿ ಈದ್ 2022 ರ ಮೊದಲು, ಸೋಮವಾರ ತಡರಾತ್ರಿ ಎರಡು ಸಮುದಾಯಗಳ ಜನರ ನಡುವೆ ಘರ್ಷಣೆ ಸಂಭವಿಸಿದೆ. ಜೋಧಪುರದ ಜಲೌರಿ ಗೇಟ್ ಛೇದಕದಲ್ಲಿ ಸ್ವಾತಂತ್ರ್ಯ ಹೋರಾಟಗಾರನ ಪ್ರತಿಮೆ ಮೇಲೆ ಇಸ್ಲಾಮಿಕ್ ಧ್ವಜ ಹಾರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕಲ್ಲು ತೂರಾಟದವರೆಗೂ ಸಾಗಿದೆ. ಕಲ್ಲು ತೂರಾಟದಲ್ಲಿ ಹಲವರು ಗಾಯಗೊಂಡಿದ್ದಾರೆ.
Rajasthan: Ruckus in Jodhpur's Jalori Gate area pic.twitter.com/6IGhmVmmPX
— ANI MP/CG/Rajasthan (@ANI_MP_CG_RJ) May 3, 2022
ಇದನ್ನೂ ಓದಿ- PM Kisan: ಇ-ಕೆವೈಸಿ ಕುರಿತು ಸರ್ಕಾರದ ಮಹತ್ವದ ಅಪ್ಡೇಟ್, ಯಾವಾಗ ಖಾತೆ ಸೇರಲಿದೆ 11ನೇ ಕಂತು?
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ನಿಯಂತ್ರಣ ಕೊಠಡಿಯಿಂದ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು. ಇದರೊಂದಿಗೆ ತಕರಾರು ಇದ್ದ ರಸ್ತೆಯನ್ನು ಮುಚ್ಚಲಾಯಿತು. ಈ ವೇಳೆ, ಗುಂಪನ್ನು ಚದುರಿಸಲು ನಿರತರಾಗಿದ್ದ ಪೊಲೀಸರ ಮೇಲೆ ಕಲ್ಲು ತೂರಾಟವನ್ನೂ ನಡೆಸಲಾಗಿದೆ ಎಂದು ವರದಿ ಆಗಿದೆ. ಸದ್ಯ ಇಡೀ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಮು ಸೌಹಾರ್ದತೆಯಿಂದ ಹಬ್ಬ ಆಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.