ನವದೆಹಲಿ: ದೇಶದ ಪ್ರತಿಷ್ಠಿತ ರಂಗಭೂಮಿ ತರಬೇತಿ ಕೇಂದ್ರವಾದ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ವಿದ್ಯಾರ್ಥಿನಿಯೋಬ್ಬರಿಗೆ ಅತಿಥಿ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ವಿದ್ಯಾರ್ಥಿನಿ ದಾಖಲಿಸಿರುವ ಕಿರುಕುಳ ಪ್ರಕರಣದಲ್ಲಿ ಎನ್ ಎಸ್ ಡಿ ಈ ಅತಿಥಿ ಶಿಕ್ಷಕ ಅಸಂಬದ್ದವಾಗಿ ನಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಗಸ್ಟ್ 1 ರಂದು ಪೊಲೀಸರು ಅತಿಥಿ ಶಿಕ್ಷಕ ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಪ್ರಾಯೋಗಿಕ ಪರೀಕ್ಷೆಯ ಭಾಗವಾಗಿ, ದೃಶ್ಯದ ಬಗ್ಗೆ ನಟಿಸಲು ಅತಿಥಿ ಶಿಕ್ಷಕ ವಿದ್ಯಾರ್ಥಿನಿಗೆ ಕೇಳಿಕೊಂಡಿದ್ದಾನೆ, ಈ ಸಮಯದಲ್ಲಿ ವಿದ್ಯಾರ್ಥಿನಿ ಜೊತೆ ಅಸಂಬದ್ಧವಾಗಿ ನಡೆದುಕೊಂಡಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ಅತಿಥಿ ಶಿಕ್ಷಕರು 62 ವರ್ಷದ ನಿವೃತ್ತ ಪ್ರಾಧ್ಯಾಪಕರಾಗಿದ್ದಾರೆ ಎಂದು ತಿಳಿದುಬಂದಿದೆ.