ನವದೆಹಲಿ: ಇತ್ತೀಚೆಗಿನ ಎಸ್ಸಿ/ಎಸ್ಟಿ ಕಾಯ್ದೆಯ ಕುರಿತ ತೀರ್ಪು ಕಾನೂನಿನ ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಸುಪ್ರೀಂಕೋರ್ಟ್ ನ ಈ ಕ್ರಮದಿಂದ ದೇಶಕ್ಕೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ ಆದ್ದರಿಂದ ಮತ್ತು ಅದನ್ನು ಸರಿಪಡಿಸಲು ನ್ಯಾಯಾಲಯವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ತೆಗೆದುಕೊಂಡಿರುವ ವಿಚಾರವು ಅತ್ಯಂತ ಸೂಕ್ಷ್ಮ ಸ್ವಭಾವವನ್ನು ಹೊಂದಿದ್ದು ಇದು ದೇಶದಲ್ಲಿ ಗಲಭೆ ಮತ್ತು ಸೌಹಾರ್ಧತೆಕೆ ಧಕ್ಕೆಯನ್ನು ತಂದಿದೆ ಎಂದು ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಅಲ್ಲದೆ ಇನ್ನು ಮುಂದುವರೆದು ಈ ವಿಚಾರವಾಗಿ ನೀಡಿರುವ ತೀರ್ಪು ಸಾಕಷ್ಟು ಗೊಂದಲವನ್ನು ಸೃಷ್ಟಿಸಿದೆ. ಆದ್ದರಿಂದ ನ್ಯಾಯಾಲಯವು ಇದನ್ನು ಪುನರ್ ಪರಿಶೀಲಿಸಬೇಕು ಎಂದು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಲಿಖಿತವಾಗಿ ಸುಪ್ರಿಂಕೋರ್ಟ್ ಗೆ ಕೇಂದ್ರ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.