Electoral Bonds: ಏನಿದು ಎಲೆಕ್ಟೋರಲ್ ಬಾಂಡ್ ಯೋಜನೆ.. ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣ ಏನು?

Electoral Bond Scheme: ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. 

Written by - Chetana Devarmani | Last Updated : Feb 15, 2024, 02:47 PM IST
  • ಎಲೆಕ್ಟೋರಲ್ ಬಾಂಡ್ ಯೋಜನೆ
  • ಎಲೆಕ್ಟೋರಲ್ ಬಾಂಡ್ ಯೋಜನೆ ರದ್ದು
  • ಎಲೆಕ್ಟೋರಲ್ ಬಾಂಡ್ ಯೋಜನೆ ಎಂದರೇನು?
Electoral Bonds: ಏನಿದು ಎಲೆಕ್ಟೋರಲ್ ಬಾಂಡ್ ಯೋಜನೆ.. ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣ ಏನು? title=
ಎಲೆಕ್ಟೋರಲ್ ಬಾಂಡ್

What Is Electoral Bond Scheme: ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಕಪ್ಪುಹಣವನ್ನು ತಡೆಗಟ್ಟುವ ಉದ್ದೇಶದಿಂದ ಮಾಹಿತಿ ಹಕ್ಕು ಉಲ್ಲಂಘನೆ ಸಮರ್ಥನೀಯವಲ್ಲ, ಎಲೆಕ್ಟೋರಲ್ ಬಾಂಡ್ ಯೋಜನೆಯು ಮಾಹಿತಿ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ರಾಜಕೀಯ ಪಕ್ಷಗಳಿಂದ ಹಣಕಾಸಿನ ಮಾಹಿತಿಯನ್ನು ಬಹಿರಂಗಪಡಿಸದಿರುವುದು ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಲಾಗಿದೆ.

ಎಲೆಕ್ಟೋರಲ್ ಬಾಂಡ್ ಗಳನ್ನು ತಕ್ಷಣವೇ ನಿಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎಲೆಕ್ಟೋರಲ್ ಬಾಂಡ್ ಗಳ ಮೂಲಕ ಇದುವರೆಗೆ ನೀಡಿದ ಎಲ್ಲಾ ಕೊಡುಗೆಗಳ ವಿವರಗಳನ್ನು ಮಾರ್ಚ್ 31 ರೊಳಗೆ ಚುನಾವಣಾ ಆಯೋಗಕ್ಕೆ ನೀಡಬೇಕು’ ಎಂದು ಕೋರ್ಟ್ ಸೂಚನೆಗಳನ್ನು ನೀಡಿದೆ. ಏಪ್ರಿಲ್ 13 ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. 

ಇದನ್ನೂ ಓದಿ: PINEWZನಲ್ಲಿ ಲೋಕಸಭೆ ಚುನಾವಣಾ ಸರ್ವೇ: ದೇಶದ ಪ್ರತಿಯೊಬ್ಬರೂ ಭಾಗವಹಿಸುವ ಸುವರ್ಣಾವಕಾಶ 

ಎಲೆಕ್ಟೋರಲ್ ಬಾಂಡ್ ಯೋಜನೆಯು ಆರ್ಟಿಕಲ್ 19(1)(ಎ) ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ಅಸಂವಿಧಾನಿಕ ಎಂದು ನ್ಯಾಯಾಲಯ ಪರಿಗಣಿಸಿದೆ. ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸುವ ಮೂಲಕ ಅದನ್ನು ರದ್ದುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಎಲೆಕ್ಟೋರಲ್ ಬಾಂಡ್ ಎಂದರೇನು?

ಭಾರತ ಸರ್ಕಾರವು 2017 ರಲ್ಲಿ ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಘೋಷಿಸಿತು. ಈ ಯೋಜನೆಯನ್ನು ಸರ್ಕಾರವು 29 ಜನವರಿ 2018 ರಂದು ಕಾನೂನುಬದ್ಧವಾಗಿ ಜಾರಿಗೊಳಿಸಿತು. ನಾವು ಅದನ್ನು ಸರಳ ಭಾಷೆಯಲ್ಲಿ ಅರೈಸುವುದಾದರೆ ಎಲೆಕ್ಟೋರಲ್ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಆರ್ಥಿಕ ಸಾಧನವಾಗಿದೆ. ಇದು ಪ್ರಾಮಿಸರಿ ನೋಟ್‌ನಂತಿದ್ದು, ಭಾರತದ ಯಾವುದೇ ನಾಗರಿಕ ಅಥವಾ ಕಂಪನಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಶಾಖೆಗಳಿಂದ ಖರೀದಿಸಬಹುದು ಮತ್ತು ತಮ್ಮ ಆಯ್ಕೆಯ ಯಾವುದೇ ರಾಜಕೀಯ ಪಕ್ಷಕ್ಕೆ ಅನಾಮಧೇಯವಾಗಿ ದೇಣಿಗೆ ನೀಡಬಹುದು.

KYC ವಿವರಗಳು ಲಭ್ಯವಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಯಾವುದೇ ದಾನಿ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಬಹುದು. ಎಲೆಕ್ಟೋರಲ್ ಬಾಂಡ್‌ಗಳು ಪಾವತಿಸುವವರ ಹೆಸರನ್ನು ಹೊಂದಿರುವುದಿಲ್ಲ. ಈ ಯೋಜನೆಯಡಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದಿಷ್ಟ ಶಾಖೆಗಳಿಂದ ರೂ 1,000, ರೂ 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿಯ ಯಾವುದೇ ಮುಖಬೆಲೆಯ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಬಹುದು.

ಎಲೆಕ್ಟೋರಲ್ ಬಾಂಡ್‌ಗಳು ಕೇವಲ 15 ದಿನಗಳ ಅವಧಿಯನ್ನು ಹೊಂದಿರುತ್ತವೆ, ಈ ಅವಧಿಯಲ್ಲಿ ಅವುಗಳನ್ನು ಪ್ರಜಾಪ್ರತಿನಿಧಿ ಕಾಯ್ದೆಯಡಿ ನೋಂದಾಯಿಸಲಾದ ರಾಜಕೀಯ ಪಕ್ಷಗಳಿಗೆ ದೇಣಿಗೆಗಾಗಿ ಮಾತ್ರ ಬಳಸಬಹುದು. ಲೋಕಸಭೆ ಅಥವಾ ವಿಧಾನಸಭೆಗೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ ಶೇಕಡಾ 1 ರಷ್ಟು ಮತಗಳನ್ನು ಪಡೆದ ರಾಜಕೀಯ ಪಕ್ಷಗಳಿಗೆ ಮಾತ್ರ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಬಹುದು.

ಇದನ್ನೂ ಓದಿ: Electoral Bonds ಯೋಜನೆಗೆ ನಿಷೇಧ, ಸುಪ್ರೀಂ ತೀರ್ಪಿಗೆ ಈಶ್ವರ ಖಂಡ್ರೆ ಸ್ವಾಗತ

ಎಲೆಕ್ಟೋರಲ್ ಬಾಂಡ್‌ಗಳನ್ನು ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ 10 ದಿನಗಳ ಅವಧಿಗೆ ಖರೀದಿಸಲು ಲಭ್ಯವಿರುತ್ತದೆ. ಲೋಕಸಭೆ ಚುನಾವಣೆಯ ವರ್ಷದಲ್ಲಿ ಕೇಂದ್ರ ಸರ್ಕಾರವು ಸೂಚಿಸಿದ 30 ದಿನಗಳ ಹೆಚ್ಚುವರಿ ಅವಧಿಯಲ್ಲಿ ಇವುಗಳನ್ನು ನೀಡಬಹುದು.

ಎಲೆಕ್ಟೋರಲ್ ಬಾಂಡ್‌​ ಹೇಗೆ ಕಾರ್ಯನಿರ್ವಹಿಸುತ್ತವೆ?

ಎಲೆಕ್ಟೋರಲ್ ಬಾಂಡ್‌ಗಳನ್ನು ಬಳಸುವುದು ತುಂಬಾ ಸುಲಭ. ನೀವು ಇವುಗಳನ್ನು ಎಸ್‌ಬಿಐನ ಕೆಲವು ಶಾಖೆಗಳಲ್ಲಿ ಪಡೆಯುತ್ತೀರಿ. ನೀವು ಈ ಬಾಂಡ್‌ನ್ನು ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ ನಂತರ ಇದರ ನಂತರ ರಿಸೀವರ್ ಅದನ್ನು ನಗದು ಆಗಿ ಪರಿವರ್ತಿಸಬಹುದು. ಪಕ್ಷದ ಪರಿಶೀಲಿಸಿದ ಖಾತೆಯನ್ನು ಎನ್‌ಕ್ಯಾಶ್ ಮಾಡಲು ಬಳಸಲಾಗುತ್ತದೆ. ಎಲೆಕ್ಟೋರಲ್ ಬಾಂಡ್‌ಗಳು 15 ದಿನಗಳವರೆಗೆ ಮಾತ್ರ ಮಾನ್ಯವಾಗಿರುತ್ತವೆ.

ಯಾರು ಚುನಾವಣಾ ಬಾಂಡ್ ಪಡೆಯುತ್ತಾರೆ?

ದೇಶದ ಎಲ್ಲಾ ನೋಂದಾಯಿತ ರಾಜಕೀಯ ಪಕ್ಷಗಳು ಈ ಬಾಂಡ್ ಅನ್ನು ಪಡೆಯುತ್ತವೆ, ಆದರೆ ಇದಕ್ಕೆ ಷರತ್ತು ಎಂದರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆ ಪಕ್ಷವು ಕನಿಷ್ಠ ಒಂದು ಶೇಕಡಾ ಅಥವಾ ಹೆಚ್ಚಿನ ಮತಗಳನ್ನು ಪಡೆದಿರಬೇಕು. ಅಂತಹ ನೋಂದಾಯಿತ ಪಕ್ಷವು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು ಸ್ವೀಕರಿಸಲು ಅರ್ಹವಾಗಿರುತ್ತದೆ. ಸರ್ಕಾರದ ಪ್ರಕಾರ, 'ಚುನಾವಣಾ ಬಾಂಡ್‌ಗಳ ಮೂಲಕ ಕಪ್ಪುಹಣಕ್ಕೆ ಕಡಿವಾಣ ಹಾಕಲಾಗುವುದು. ಚುನಾವಣೆಯಲ್ಲಿ ನೀಡಿದ ದೇಣಿಗೆ ಮೊತ್ತದ ಖಾತೆಗಳನ್ನು ನಿರ್ವಹಿಸಬಹುದು. ಇದರಿಂದ ಚುನಾವಣಾ ಫಂಡಿಂಗ್ ಸುಧಾರಿಸುತ್ತದೆ. ಚುನಾವಣಾ ಬಾಂಡ್ ಯೋಜನೆ ಪಾರದರ್ಶಕವಾಗಿದೆ ಎಂದು ಕೇಂದ್ರ ಸರ್ಕಾರ ತನ್ನ ಕೌಂಟರ್ ಅಫಿಡವಿಟ್‌ನಲ್ಲಿ ಹೇಳಿದೆ.

2017 ರಲ್ಲಿ, ಕೇಂದ್ರ ಸರ್ಕಾರವು ಹಣಕಾಸು ಮಸೂದೆಯ ಮೂಲಕ ಸಂಸತ್ತಿನಲ್ಲಿ ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಪರಿಚಯಿಸಿತು. ಸಂಸತ್ತು ಅಂಗೀಕರಿಸಿದ ನಂತರ, ಚುನಾವಣಾ ಬಾಂಡ್ ಯೋಜನೆಯ ಅಧಿಸೂಚನೆಯನ್ನು 29 ಜನವರಿ 2018 ರಂದು ಹೊರಡಿಸಲಾಯಿತು. ರಾಜಕೀಯ ಪಕ್ಷಗಳು ಈ ಮೂಲಕ ದೇಣಿಗೆ ಪಡೆಯುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News