ಸರ್ಜಿಕಲ್‌ ಸ್ಟ್ರೈಕ್‌ ದಿನ ಆಚರಣೆ ಮಮತಾ ಬ್ಯಾನರ್ಜಿ ನಕಾರ

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸರ್ಜಿಕಲ್‌ ಸ್ಟ್ರೈಕ್‌ ದಿನ ಆಚರಣೆಗೆ ವಿರೋಧ ವ್ಯಕ್ತಪಡಿಸಿದೆ. 

Last Updated : Sep 21, 2018, 05:33 PM IST
ಸರ್ಜಿಕಲ್‌ ಸ್ಟ್ರೈಕ್‌ ದಿನ ಆಚರಣೆ ಮಮತಾ ಬ್ಯಾನರ್ಜಿ ನಕಾರ title=

ಕೋಲ್ಕತಾ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ಪಕ್ಷವು ಮತ್ತೊಂದು ಬಿಕ್ಕಟ್ಟನ್ನು ಎದುರಿಸುತ್ತಿದೆ. 

ಯುಜಿಸಿಯು ಸೆಪ್ಟೆಂಬರ್ 29ರಂದು ದೇಶಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ "ಸರ್ಜಿಕಲ್ ಸ್ಟ್ರೈಕ್ ಡೇ" ಆಚರಿಸಬೇಕೆಂದು ಗುರುವಾರ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, 'ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಈ ಆಚರಣೆ ಮಾಡುವುದಿಲ್ಲ' ಎಂದು ಹೇಳಿದೆ. 

ಪಶ್ಚಿಮ ಬಂಗಾಳದಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯನ್ನು ಆಚರಿಸುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜಕೀಯ ಮಾಡುತ್ತಿದೆ. ಚುನಾವಣೆಗೂ ಮುನ್ನ ದುರದ್ದೇಶದಿಂದ ಈ ಕೆಲಸ ಮಾಡುತ್ತಿದೆ ಎಂದು ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ.

2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು ಪರಾಕ್ರಮ ಮೆರೆದಿದ್ದ ಆ ದಿನವನ್ನು ಸರ್ಜಿಕಲ್ ಸ್ಟ್ರೈಕ್ ದಿನವನ್ನಾಗಿ ಆಚರಿಸಲಾಗುತ್ತಿದೆ.

Trending News