ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಮರುನಾಮಕರಣ!

ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣವನ್ನು ಪುರಚಿ ತಲೈವಾರ್ ಡಾ. ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.  

Last Updated : Apr 6, 2019, 12:53 PM IST
ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಮರುನಾಮಕರಣ! title=
Image Courtesy: Pixabay

ಚೆನ್ನೈ: ತಮಿಳುನಾಡು ಸರ್ಕಾರ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣವನ್ನು ಪುರಚಿ ತಲೈವಾರ್ ಡಾ. ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಿದೆ.

ತಮಿಳುನಾಡು ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್ ಹೊರಡಿಸಿರುವ ಸರ್ಕಾರದ ಅಧಿಸೂಚನೆಯಲ್ಲಿ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣವನ್ನು ಪುರಚಿ ತಲೈವಾರ್ ಡಾ. ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣವನ್ನು ಎಂಜಿಆರ್ ಸ್ಮರಣಾರ್ಥವಾಗಿ  'ಪುರಚಿ ತಲೈವಾರ್ ಡಾ ಎಂ.ಜಿ. ರಾಮಚಂದ್ರನ್ ರೈಲ್ವೇ ಸ್ಟೇಷನ್' ಎಂದು ಮರುನಾಮಕರಣ ಮಾಡುವಂತೆ ಸ್ಟೇಟ್ ಕ್ಯಾಬಿನೆಟ್ ಸೆಪ್ಟೆಂಬರ್ 2018 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ತಿಂಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿ ಚುನಾವಣೆಯ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಚೆನ್ನೈ ರೈಲು ನಿಲ್ದಾಣಕ್ಕೆ ಎಐಎಡಿಎಂಕೆ ಸ್ಥಾಪಕ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಜಿ.ಆರ್ ಅವರ ಹೆಸರಿಡಲಾಗುವುದು ಎಂದು ಘೋಷಿಸಿದ್ದರು.

ಪ್ರಧಾನಿ ಮೋದಿಯವರ ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ರಾಜ್ಯದ ಜನತೆ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಿದ್ದರು.

Trending News