Tamil Nadu Rains: ತಮಿಳುನಾಡಿನಲ್ಲಿ ಮಳೆಯ ಹೊಡೆತಕ್ಕೆ ನೆಲಕಚ್ಚಿದ ಮಳೆ, 4 ಮಕ್ಕಳು ಸೇರಿದಂತೆ 9 ಜನರ ದಾರುಣ ಸಾವು

Heavy Rain In Tamil Nadu: ಚೆನ್ನೈ ಮತ್ತು ತಮಿಳುನಾಡಿನ ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಈ ಅಪಘಾತಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಲಾಗಿದೆ.

Written by - Nitin Tabib | Last Updated : Nov 19, 2021, 04:35 PM IST
  • ಭೀಕರ ಮಳೆಗೆ ತಮಿಳು ನಾಡು ತತ್ತರ.
  • ಭಾರಿ ಮಳೆಗೆ ನೆಲಕಚ್ಚಿದ ಮನೆ.
  • ನಾಲ್ವರು ಮಕ್ಕಳು ಸೇರಿದಂತೆ 9 ಜನರ ದಾರುಣ ಸಾವು.
Tamil Nadu Rains: ತಮಿಳುನಾಡಿನಲ್ಲಿ ಮಳೆಯ ಹೊಡೆತಕ್ಕೆ ನೆಲಕಚ್ಚಿದ ಮಳೆ, 4 ಮಕ್ಕಳು ಸೇರಿದಂತೆ 9 ಜನರ ದಾರುಣ ಸಾವು title=
Heavy Rain in Tamil Nadu (Image Courtesy - ANI)

ನವದೆಹಲಿ: Rains Havoc In Tamil Nadu - ತಮಿಳುನಾಡಿನ ವಿವಿಧೆಡೆ ಭಾರಿ ಮಳೆ ಅಬ್ಬರ ಮುಂದುವರಿದಿದೆ. ಶುಕ್ರವಾರ, ರಾಜ್ಯದ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆಯೊಂದು ಕುಸಿದಿದೆ. ಈ ಅವಘಡದಲ್ಲಿ ಇದುವರೆಗೆ 9 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತರಲ್ಲಿ ನಾಲ್ವರು ಅಮಾಯಕ ಮಕ್ಕಳೂ ಸೇರಿದ್ದಾರೆ. ಇದೇ ವೇಳೆ ಅಪಘಾತದಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (CM M.K Stalin) ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಅವರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಮಳೆಯಿಂದಾಗಿ ಮನೆ ಕುಸಿದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಅವಘಡಗಳು ವರದಿಯಾಗಿದ್ದವು. ಕಳೆದ ವಾರ, ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ-ಶಬರಿ ಮಲೆಯ ಪವಿತ್ರ ತೀರ್ಥಕ್ಕೆ ಅವಮಾನ? ಘಟನೆಯ ನಂತರ ಸಚಿವರು ನೀಡಿದ ಸ್ಪಷ್ಟನೆ ಇದು

ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ (Heavy Rain) ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಹೊಲಗಳು ಜಲಾವೃತವಾಗಿವೆ, ಮರಗಳು, ಬೆಳೆಗಳು ನಾಶವಾಗಿವೆ. ಒಂದು ಅಂಕಿ ಅಂಶದ ಪ್ರಕಾರ, ಭಾರೀ ಮಳೆಯಿಂದಾಗಿ 1 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ತಮಿಳುನಾಡಿನಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅಕ್ಟೋಬರ್ 1 ರಿಂದ ಆರಂಭವಾದ ಪ್ರಸಕ್ತ ಈಶಾನ್ಯ ಮಾನ್ಸೂನ್‌ನಲ್ಲಿ ರಾಜ್ಯದಲ್ಲಿ ಇದುವರೆಗೆ ವಾಡಿಕೆಗಿಂತ ಶೇ.61 ರಷ್ಟು ಹೆಚ್ಚು ಮಳೆಯಾಗಿದೆ.  ಈ ಅವಧಿಯಲ್ಲಿ ಉತ್ತರ ತಮಿಳುನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ.

ಇದನ್ನೂ ಓದಿ-ಬೆಂಗಳೂರಿನಲ್ಲಿಂದು ಭಾರೀ ಮಳೆ ಸಾಧ್ಯತೆ, ಹಳದಿ ಅಲರ್ಟ್ ಜಾರಿ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಭಾರ ಕುಸಿತದ ಪ್ರದೇಶ ವಾಯುವ್ಯದ ಕಡೆಗೆ ಚಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದು ನವೆಂಬರ್ 19 ರಂದು ಮುಂಜಾನೆ 3 ಮತ್ತು 4 ರ ನಡುವೆ ಪುದುಚೇರಿ ಮತ್ತು ಚೆನ್ನೈ ನಡುವೆ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಪಕ್ಕದ ಕರಾವಳಿಯನ್ನು ದಾಟಿದೆ. ಇದೇ ವೇಳೆ  ಚೆನ್ನೈ ಮತ್ತು ತಮಿಳುನಾಡಿನ ಇತರ ಉತ್ತರ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.

ಇದನ್ನೂ ಓದಿ-Heavy Rain : ಕರ್ನಾಟಕ ಸೇರಿದಂತೆ ದೇಶದ 4 ರಾಜ್ಯಗಳಲ್ಲಿ ಧಾರಾಕಾರ ಮಳೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News