ದೇಶದ್ರೋಹ ಪ್ರಕರಣ: ಎಂಡಿಎಂಕೆ ನಾಯಕನಿಗೆ ಒಂದು ವರ್ಷ ಜೈಲು ಶಿಕ್ಷೆ

2009ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 124ಎ ದೇಶದ್ರೋಹದ ಅಡಿಯಲ್ಲಿ ವೈಕೊಗೆ ಶಿಕ್ಷೆ ವಿಧಿಸಲಾಗಿದೆ.

Last Updated : Jul 5, 2019, 02:25 PM IST
ದೇಶದ್ರೋಹ ಪ್ರಕರಣ: ಎಂಡಿಎಂಕೆ ನಾಯಕನಿಗೆ ಒಂದು ವರ್ಷ ಜೈಲು ಶಿಕ್ಷೆ title=

ಚೆನ್ನೈ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅವರಿಗೆ ಒಂದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತಮಿಳುನಾಡು ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

2009ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 124ಎ ದೇಶದ್ರೋಹದ ಅಡಿಯಲ್ಲಿ ವೈಕೊಗೆ ಶಿಕ್ಷೆ ವಿಧಿಸಲಾಗಿದ್ದು, 10 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ.

ಶ್ರೀಲಂಕಾ ನಾಗರಿಕ ಯುದ್ಧ ಉತ್ತುಂಗಕ್ಕೇರಿದ್ದ ವೇಳೆ ಎಲ್​ಟಿಟಿಇ ಬೆಂಬಲಿಸಿ ಚೆನ್ನೈನಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವೈಕೋ ದೇಶದ್ರೋಹದ ಭಾಷಣ ಮಾಡಿದ್ದರು. ಈ ಸಂಬಂಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 

Trending News