ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದೆ.
ದಕ್ಷಿಣ ಭಾರತದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಿರುವ ಅತಿ ದೊಡ್ಡ ಪಕ್ಷವಾದ ತೆಲುಗು ದೇಶಂ ಪಕ್ಷವು, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ಒತ್ತಾಯಿಸಿದ್ದು, ಮುಂಬರಲಿರುವ ಮಾನ್ಸೂನ್ ಅಧಿವೇಶನದಲ್ಲಿ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದೆ.
ಈ ವರ್ಷದ ಆರಂಭದ ಅಧಿವೇಶನದಲ್ಲಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ನೋಟಿಸ್ ನೀಡಿದ ನಂತರ ತೆಲುಗು ದೇಶಂ ಪಕ್ಷ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿತ್ತು. ಆದರೆ, ಅಧಿವೇಶನದ ಪುನರಾವರ್ತಿತ ಮುಂದೂಡಿಕೆಯಿಂದಾಗಿ ಅದು ಸಾಧ್ಯಾವಾಗಿರಲಿಲ್ಲ. ರಾಜ್ಯ ವಿಭಜನೆ ನಂತರ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಆದರೆ ಎನ್ ಡಿಎ ಸರ್ಕಾರ ಆಂಧ್ರ ಪ್ರದೇಶಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ರಣಕಹಳೆ ಊದಿತ್ತು.