ಹೈದರಾಬಾದ್: ಮಾರಕ ಕರೋನಾವೈರಸ್ (Coronavirus) ನಿಯಂತ್ರಣಕ್ಕೆ ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ಡೌನ್ ಅವಧಿಯನ್ನು ತೆಲಂಗಾಣದಲ್ಲಿ ವಿಸ್ತರಿಸಲು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrasekhar Rao) ಚಿಂತನೆ ನಡೆಸಿದ್ದಾರೆ.
ಈ ಹಿಂದೆ ಇಡೀ ದೇಶ 21 ದಿನ ಲಾಕ್ಡೌನ್ (Lockdown) ಮಾಡಲಾಗಿದ್ದರೂ, ಈ ಅವಧಿಯಲ್ಲಿ ಯಾರೂ ಮನೆಯಿಂದ ಹೊರಗೆಬಾರದಂತೆ ಮನವಿ ಮಾಡಿದ್ದರೂ ತೆಲಂಗಾಣದಲ್ಲಿ ಜನ ಗುಂಪು ಸೇರುತ್ತಿದ್ದರು. ಇದರ ಬೆನ್ನಲ್ಲೇ ತೆಲಂಗಾಣದಲ್ಲಿ ಏ.14ರವರೆಗೆ ಇದ್ದ ಈ ಲಾಕ್ಡೌನ್ ಅವಧಿಯನ್ನು ಮೊದಲಿಗೆ ಇನ್ನೆರಡು ದಿನಕ್ಕೆ ಅಂದರೆ ಏ.16ರವರೆಗೂ ವಿಸ್ತರಿಸಲಾಗಿತ್ತು. ಆದರೀಗ ಮತ್ತೆ ಅವಧಿ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.
ಏಪ್ರಿಲ್ 7 ರೊಳಗೆ ತೆಲಂಗಾಣ Coronavirus ಮುಕ್ತವಾಗಲಿದೆ: ಸಿಎಂ ಕೆಸಿಆರ್ ವಿಶ್ವಾಸ
ಪ್ರಧಾನಿ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡುವ ವೇಳೆ ಲಾಕ್ ಡೌನ್ ಅವಧಿ ವಿಸ್ತರಿಸುವುದೇ ಸೂಕ್ತ ಎಂದು ಚಂದ್ರಶೇಖರ್ ಹೇಳಿದ್ದಾರೆಂದು ತಿಳಿದುಬಂದಿದೆ. ಬಹಳಷ್ಟು ಕ್ರಮಗಳನ್ನು ಕೈಗೊಂಡಿದ್ದರೂ ತೆಲಾಂಗಣದಲ್ಲಿ ಕರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಚಂದ್ರಶೇಖರ್ ರಾವ್ ಈ ರೀತಿಯ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಕೋವಿಡ್ 19 ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ ಮಾಡಲಾಗಿದೆ. ಹಾಗಾಗಿ ಜನ ಮನೆಯಲ್ಲೇ ಇರಬೇಕು. ಒಂದು ವೇಳೆ ಜನ ಲಾಕ್ಡೌನ್ ಉಲ್ಲಂಘಿಸುವುದನ್ನು ಮುಂದುವರಿಸಿದಲ್ಲಿ ನಾನು ಕಂಡಲ್ಲಿ ಗುಂಡಿಕ್ಕಿ ಆದೇಶ ಜಾರಿಗೊಳಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ತೆಲಂಗಾಣದಲ್ಲಿ ಇಲ್ಲಿಯವರೆಗೂ ಸುಮಾರು 400 ಪ್ರಕರಣಗಳು ಕಂಡು ಬಂದಿವೆ.