ಸತತ ಎರಡನೇ ಬಾರಿಗೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿದ ತೆಲಂಗಾಣ ಸಿಎಂ..!

ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) ಸ್ಥಾಪನೆಯ 20 ವರ್ಷಗಳನ್ನು ಪೂರೈಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹೈದರಾಬಾದ್ ಗೆ ಆಗಮಿಸಿದ ಬೆನ್ನಲ್ಲೇ ತೆಲಂಗಾಣದ ಮುಖ್ಯಮಂತ್ರಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಬೆಂಗಳೂರಿಗೆ ಹಾರಿದ್ದು, ಬಿಜೆಪಿ ನಾಯಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 

Last Updated : May 26, 2022, 08:31 PM IST
  • ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ನಿವಾಸದಲ್ಲಿ ಕೆಸಿಆರ್ ಅವರು ಗುರುವಾರ ಸಭೆ ನಡೆಸಿದರು.
  • ಈ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ದೇವೇಗೌಡರ ಪುತ್ರ ಎಚ್‌ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.
ಸತತ ಎರಡನೇ ಬಾರಿಗೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿದ ತೆಲಂಗಾಣ ಸಿಎಂ..!  title=

ಬೆಂಗಳೂರು: ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) ಸ್ಥಾಪನೆಯ 20 ವರ್ಷಗಳನ್ನು ಪೂರೈಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹೈದರಾಬಾದ್ ಗೆ ಆಗಮಿಸಿದ ಬೆನ್ನಲ್ಲೇ ತೆಲಂಗಾಣದ ಮುಖ್ಯಮಂತ್ರಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಬೆಂಗಳೂರಿಗೆ ಹಾರಿದ್ದು, ಬಿಜೆಪಿ ನಾಯಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 

ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಉಲ್ಲಂಘಿಸಿ ತೆಲಂಗಾಣ ಮುಖ್ಯಮಂತ್ರಿ ಪ್ರಧಾನಿ ಮೋದಿ ಭೇಟಿಗೆ ಗೈರು ಹಾಜರಾಗಿದ್ದು ಇದು ಎರಡನೇ ಬಾರಿ ಎನ್ನಲಾಗಿದೆ.ಇದಕ್ಕೂ ಮೊದಲು ಫೆಬ್ರವರಿಯಲ್ಲಿ, ಮುಚಿಂತಲ್‌ನಲ್ಲಿ ಸಮಾನತೆಯ ಪ್ರತಿಮೆಯನ್ನು ಅನಾವರಣಗೊಳಿಸಲು ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗುವುದನ್ನು ತಪ್ಪಿಸಿದ್ದರು. 

ಇದನ್ನೂ ಓದಿ : ಸಿದ್ದರಾಮಯ್ಯ ಮತ್ತು ಡಿಕೆಶಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ: ಬಿಜೆಪಿ ಟೀಕೆ

ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ನಿವಾಸದಲ್ಲಿ ಕೆಸಿಆರ್ ಅವರು ಗುರುವಾರ ಸಭೆ ನಡೆಸಿದರು.ಈ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ದೇವೇಗೌಡರ ಪುತ್ರ ಎಚ್‌ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

ಇದೆ ವೇಳೆ ದೇವೇಗೌಡರ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಸಿಆರ್ 'ನಾವು ರಾಷ್ಟ್ರೀಯ ಮತ್ತು ಕರ್ನಾಟಕ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ.ರಾಷ್ಟ್ರ ಮಟ್ಟದಲ್ಲಿ ಬದಲಾವಣೆಯಾಗಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ...ದೇಶದಲ್ಲಿ ಆದಿವಾಸಿಗಳು, ರೈತರು ಮತ್ತು ಬಡವರು ಸಂತೋಷವಾಗಿಲ್ಲ.ಕೈಗಾರಿಕೆಗಳು ಮುಚ್ಚುತ್ತಿವೆ, ಜಿಡಿಪಿ ಕುಸಿಯುತ್ತಿದೆ, ಹಣದುಬ್ಬರ ಹೆಚ್ಚುತ್ತಿದೆ ಮತ್ತು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : RSS ಮೆಚ್ಚಿಸಲು ಬಿಜೆಪಿ ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ: ಕಾಂಗ್ರೆಸ್

2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ವಿರೋಧಿ ನಾಯಕರನ್ನು ಒಟ್ಟುಗೂಡಿಸಿ ತೃತೀಯ ರಂಗವನ್ನು ರಚಿಸುವ ಅವರ ಪ್ರಯತ್ನದ ಭಾಗವಾಗಿ ಕೆಸಿಆರ್ ಅವರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ.ಕಳೆದ ವಾರದ ಆರಂಭದಲ್ಲಿ ಅವರು ನವದೆಹಲಿಯಲ್ಲಿ ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದರು.

ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಪರ್ಯಾಯ ರಂಗಕ್ಕಾಗಿ ಶ್ರಮಿಸುತ್ತಿದ್ದು, ಇದರ ಭಾಗವಾಗಿ ಹಲವಾರು ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.ಅವರು ದೇಶವನ್ನು ಉಳಿಸಲು ಮತ್ತು ರಾಷ್ಟ್ರ ಮತ್ತು ಬಡ ಜನರ ಹಿತಾಸಕ್ತಿಯಲ್ಲಿ ಬದಲಾವಣೆ ತರಲು ಬಯಸಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೇಳಿದ್ದಾರೆ.

ಇದೇ ವೇಳೆ, ಇದಕ್ಕೂ ಮುನ್ನ ತೆಲಂಗಾಣದಲ್ಲಿ ಕೆಸಿಆರ್ ಅವರ ಟಿಆರ್‌ಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಒಂದು ಕುಟುಂಬಕ್ಕೆ ಮೀಸಲಾದ ಪಕ್ಷಗಳು ಅಧಿಕಾರಕ್ಕೆ ಬಂದಾಗ ಆ ಕುಟುಂಬದ ಸದಸ್ಯರು ಭ್ರಷ್ಟಾಚಾರದ ದೊಡ್ಡ ಮುಖಗಳಾಗುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ''ರಾಜಕೀಯ ರಾಜವಂಶಗಳಿಂದಾಗಿ ದೇಶದ ಯುವಕರು, ಪ್ರತಿಭೆಗಳಿಗೆ ರಾಜಕೀಯ ಪ್ರವೇಶಿಸುವ ಅವಕಾಶವೂ ಸಿಗುತ್ತಿಲ್ಲ. ಪರಿವಾರವಾದವು ಅಂತಹ ಯುವಕರ ಪ್ರತಿ ಕನಸನ್ನೂ ನುಚ್ಚುನೂರು ಮಾಡಿದೆ.ಹಾಗಾಗಿ ಅವರೆಲ್ಲರ ಬಾಗಿಲು ಮುಚ್ಚಿದೆ' ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News