ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿರುವ ಸಿಆರ್ಪಿಎಫ್ ತರಬೇತಿ ಕೇಂದ್ರದ ಮೇಲೆ ಭಾನುವಾರ ಜೈಶ್ ಇ ಮೊಹಮದ್ ಉಗ್ರರು ದಾಳಿ ಮಾಡಿದ್ದು, ದಾಳಿಯಲ್ಲಿ ನಾಲ್ವರು ಸೈನಿಕರು ಮತ್ತು ಮೂವರು ಉಗ್ರರು ಗುಂಡಿನ ಚಕಮಕಿಯಲ್ಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 2:10 ದಾಳಿ ಮಾಡಿದ ಉಗ್ರರು, ದಾಳಿಯಲ್ಲಿ ನಾಲ್ವರು ಸೈನಿಕರನ್ನು ಹತ್ಯೆಗೈದಿದ್ದಾರೆ. ಗಾಯಗೊಂಡಿರುವ ಸೈನಿಕರನ್ನು ಹತ್ತಿರದ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಅವಂತಿಪುರಾದ ತರಬೇತಿ ಕೇಂದ್ರದ ಮೇಲೆ ದಾಳಿ ಮಾಡಿದ ಉಗ್ರರು ಸುಮಾರು 15 ರಿಂದ 20 ನಿಮಿಷಗಳವರೆಗೆ ನಿರಂತರವಾಗಿ ಸೈನಿಕ ನೆಲೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ.
ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಸಂಘಟನೆಯು ಹೊತ್ತುಕೊಂಡಿದೆ ಎಂದು ಪೋಲಿಸ ವರಿಷ್ಠಾಧಿಕಾರಿ ವೈಧ್ಯ ತಿಳಿಸಿದ್ದಾರೆ. ಅಲ್ಲದೆ ಕಳೆದ ಮೂರು ದಿನಗಳಿಂದ ಉಗ್ರರು ಈ ನೆಲೆಯ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿದ್ದರು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.