ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯ ಗರಿಷ್ಠ ಬೆಲೆ ನಿಗದಿಪಡಿಸಿದ ಕೇಂದ್ರ ಸರ್ಕಾರ

ಲಾಭದಾಯಕ ಆರೋಪದ ಮಧ್ಯೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಗಳಿಗೆ ವಿಧಿಸಬಹುದಾದ ಗರಿಷ್ಠ ಬೆಲೆಯನ್ನು ಇಂದು ಕೇಂದ್ರ ಸರ್ಕಾರ ನಿಗದಿಪಡಿಸಿದೆ.

Last Updated : Jun 8, 2021, 09:53 PM IST
  • ಲಾಭದಾಯಕ ಆರೋಪದ ಮಧ್ಯೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಗಳಿಗೆ ವಿಧಿಸಬಹುದಾದ ಗರಿಷ್ಠ ಬೆಲೆಯನ್ನು ಇಂದು ಕೇಂದ್ರ ಸರ್ಕಾರ ನಿಗದಿಪಡಿಸಿದೆ.
  • ಈಗ ಕೇಂದ್ರ ಸರ್ಕಾರವು ಕೋವಿಶೀಲ್ಡ್ (Covishield) ಗೆ ₹ 780 ಕೊವಾಕ್ಸಿನ್ (Covaxin) 1,410, ಮತ್ತು ರಷ್ಯಾದ ಲಸಿಕೆ ಸ್ಪುಟ್ನಿಕ್ ವಿ ₹ 1,145 ಕ್ಕೆ ನಿಗದಿಪಡಿಸಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯ ಗರಿಷ್ಠ ಬೆಲೆ ನಿಗದಿಪಡಿಸಿದ ಕೇಂದ್ರ ಸರ್ಕಾರ   title=
ಸಾಂದರ್ಭಿಕ ಚಿತ್ರ

ನವದೆಹಲಿ: ಲಾಭದಾಯಕ ಆರೋಪದ ಮಧ್ಯೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಗಳಿಗೆ ವಿಧಿಸಬಹುದಾದ ಗರಿಷ್ಠ ಬೆಲೆಯನ್ನು ಇಂದು ಕೇಂದ್ರ ಸರ್ಕಾರ ನಿಗದಿಪಡಿಸಿದೆ.

ಈಗ ಕೇಂದ್ರ ಸರ್ಕಾರವು ಕೋವಿಶೀಲ್ಡ್ (Covishield) ಗೆ ₹ 780 ಕೊವಾಕ್ಸಿನ್ (Covaxin) 1,410, ಮತ್ತು ರಷ್ಯಾದ ಲಸಿಕೆ ಸ್ಪುಟ್ನಿಕ್ ವಿ ₹ 1,145 ಕ್ಕೆ ನಿಗದಿಪಡಿಸಲಾಗಿದೆ. ಇದರಲ್ಲಿ ತೆರಿಗೆಗಳು ಮತ್ತು ಆಸ್ಪತ್ರೆಗಳಿಗೆ 150 ರೂಪಾಯಿ ಸೇವಾ ಶುಲ್ಕವೂ ಸೇರಿದೆ.

ಇದನ್ನೂ ಓದಿ: Alert! ದೇಶಕ್ಕೆ ಎಂಟ್ರಿ ಕೊಟ್ಟ Coronavirus ಹೊಸ ರೂಪಾಂತರಿ! ಯಾರಿಗೆ ಹೆಚ್ಚು ಅಪಾಯ?

ಖಾಸಗಿ ಆಸ್ಪತ್ರೆಗಳಲ್ಲಿ 150 ಕ್ಕಿಂತ ಹೆಚ್ಚು ಸೇವಾ ಶುಲ್ಕವನ್ನು ವಿಧಿಸಲು ಅನುಮತಿಸಬಾರದು ಎಂದು ಕೇಂದ್ರವು ರಾಜ್ಯಗಳನ್ನು ಕೇಳಿದೆ. ಖಾಸಗಿ ಆಸ್ಪತ್ರೆಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಮತ್ತು ಹೆಚ್ಚಿನ ಶುಲ್ಕ ವಿಧಿಸುವ ಯಾವುದೇ ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಸರ್ಕಾರಿ ಸಂಸ್ಥೆಗಳಲ್ಲಿ, ಎಲ್ಲಾ ಅರ್ಹ ವ್ಯಕ್ತಿಗಳಿಗೆ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ಮೋದಿ ನಿನ್ನೆ ರಾಷ್ಟ್ರವನ್ನು ಉದ್ದೇಶಿಸಿ ಪರಿಷ್ಕೃತ ಲಸಿಕೆ ನೀತಿಯನ್ನು ಪ್ರಕಟಿಸಿದರು.

ಇದನ್ನೂ ಓದಿ: Covaxin, Covishield ಇವೆರಡರಲ್ಲಿ ಯಾವ ಲಸಿಕೆ ಹೆಚ್ಚು ಪರಿಣಾಮಕಾರಿ? ಸಂಶೋಧನೆ ಹೇಳಿದ್ದೇನು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News