ರಾಷ್ಟ್ರಪತಿ ಕೊವಿಂದ್ ಆರೋಗ್ಯದಲ್ಲಿ ಸ್ಥಿರ, ಏಮ್ಸ್ ಅಸ್ಪತ್ರೆಗೆ ಶಿಫಾರಸ್ಸು

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಅವರನ್ನು ಏಮ್ಸ್ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸೇನೆಯ ಆಸ್ಪತ್ರೆ ತಿಳಿಸಿದೆ.

Last Updated : Mar 27, 2021, 06:46 PM IST
  • ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಅವರನ್ನು ಏಮ್ಸ್ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸೇನೆಯ ಆಸ್ಪತ್ರೆ ತಿಳಿಸಿದೆ.
ರಾಷ್ಟ್ರಪತಿ ಕೊವಿಂದ್ ಆರೋಗ್ಯದಲ್ಲಿ ಸ್ಥಿರ, ಏಮ್ಸ್ ಅಸ್ಪತ್ರೆಗೆ ಶಿಫಾರಸ್ಸು   title=
file photo

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಅವರನ್ನು ಏಮ್ಸ್ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸೇನೆಯ ಆಸ್ಪತ್ರೆ ತಿಳಿಸಿದೆ.

ಶುಕ್ರವಾರ ಬೆಳಿಗ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಿಲಿಟರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಅವರ ಸ್ಥಿತಿ ಸ್ಥಿರವಾಗಿದೆ. ಹೆಚ್ಚಿನ ತನಿಖೆಗಾಗಿ ಅವರನ್ನು ದೆಹಲಿಯ ಏಮ್ಸ್ (ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್) ಗೆ ಕಳುಹಿಸಲಾಗುತ್ತಿದೆ" ಎಂದು ಆಸ್ಪತ್ರೆಯು ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಿದೆ.

ಇದನ್ನೂ ಓದಿ: ರಾಷ್ಟ್ರಪತಿ ಕೊವಿಂದ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಎದೆಯ ನೋವಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ (President Ram Nath Kovind) ಅವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು."ಇಂದು ಬೆಳಿಗ್ಗೆ ಎದೆಯ ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರಪತಿ ಆರ್ಮಿ ಆಸ್ಪತ್ರೆಗೆ (ಆರ್ & ಆರ್) ಭೇಟಿ ನೀಡಿದ್ದಾರೆ. ಅವರು ವಾಡಿಕೆಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ" ಎಂದು ಆಸ್ಪತ್ರೆ ಶುಕ್ರವಾರ ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಸೇನಾ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಇದನ್ನೂ ಓದಿ: ವಿವಾದಾತ್ಮಕ 3 ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅಂಕಿತ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News