ಶಾಲಾ ಶೌಚಾಲಯದಲ್ಲಿ ಪತ್ತೆಯಾದ ಎರಡನೇ ತರಗತಿ ವಿದ್ಯಾರ್ಥಿಯ ಮೃತದೇಹ

ಗುರ್ಗಾಂವ್ನ ಪ್ರಖ್ಯಾತ ಶಾಲೆಯ ಶೌಚಾಲಯದಲ್ಲಿ ಪತ್ತೆಯಾದ ವಿದ್ಯಾರ್ಥಿಯ ಮೃತದೇಹ

Last Updated : Sep 8, 2017, 01:18 PM IST
ಶಾಲಾ ಶೌಚಾಲಯದಲ್ಲಿ ಪತ್ತೆಯಾದ ಎರಡನೇ ತರಗತಿ ವಿದ್ಯಾರ್ಥಿಯ ಮೃತದೇಹ  title=

ನವ ದೆಹಲಿ: ಗುರ್ಗಾಂವ್ ನ ಪ್ರಖ್ಯಾತ ಶಾಲೆಯಾದ ರಿಯಾನ್ ಇಂಟರ್ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ ಎರಡನೆ ತರಗತಿಯ ವಿದ್ಯಾರ್ಥಿಯ ಶವ ಪತ್ತೆಯಾದ ಘಟನೆ ಇಂದು ಬೆಳಗ್ಗೆ 8:00 ಗಂಟೆಗೆ ಬೆಳಕಿಗೆ ಬಂದಿದೆ.

ಪೊಲೀಸರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಮೃತದೇಹದ ಸಮೀಪದಲ್ಲಿ ಒಂದು ಚಾಕು ಕಂಡು ಬಂದಿದ್ದು, ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. 

Trending News