ಅಸ್ಸಾಂನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ನೇಣಿಗೆರಿಸಿದ ವಿದ್ಯಾರ್ಥಿಗಳು

ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ 10 ನೇ ತರಗತಿ ಪರೀಕ್ಷೆಗೆ ಹಾಜರಾದ ಏಳು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Mar 2, 2020, 04:07 PM IST
ಅಸ್ಸಾಂನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ನೇಣಿಗೆರಿಸಿದ ವಿದ್ಯಾರ್ಥಿಗಳು  title=
ಸಾಂದರ್ಭಿಕ ಚಿತ್ರ

ನವದೆಹಲಿ: ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ 10 ನೇ ತರಗತಿ ಪರೀಕ್ಷೆಗೆ ಹಾಜರಾದ ಏಳು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಹ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ನಡೆದ ಘಟನೆ ನಂತರ ಬಾಲಕಿಯನ್ನು ಮರಕ್ಕೆ ನೇಣಿಗೇರಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದು, ಅವರೆಲ್ಲರೂ ಹೈಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಚ್‌ಎಸ್‌ಎಲ್‌ಸಿ) ಪರೀಕ್ಷಕರು ಎನ್ನಲಾಗಿದೆ, ಪೊಲೀಸ್ ತಂಡದ ತನಿಖೆ ವೇಳೆ ಅವರು ಭಾನುವಾರ ಸಿಕ್ಕಿಬಿದ್ದಿದ್ದಾರೆ.ಪರೀಕ್ಷೆಯ ನಂತರ, ಪಾರ್ಟಿ ಆಯೋಜಿಸುವ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಮನೆಯ ಸಮೀಪ ಕಾಡಿನಲ್ಲಿ ಮರಕ್ಕೆ ನೇಣು ಹಾಕಲಾಗಿದೆ ಎಂದು ಶಂಕಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಶವ ಶನಿವಾರದಂದು ಪತ್ತೆಯಾಗಿದೆ.

Trending News