Farm Laws Repeal Bill 2021: ಪ್ರತಿಪಕ್ಷಗಳ ಗದ್ದಲದ ನಡುವೆಯೂ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅಂಗೀಕಾರ

Farm Laws Repeal Bill 2021: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಪ್ರತಿಪಕ್ಷಗಳ ಗದ್ದಲದ ನಡುವೆಯೂ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅಂಗೀಕಾರಗೊಂಡಿತು.

Written by - Zee Kannada News Desk | Last Updated : Nov 29, 2021, 02:37 PM IST
  • ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ
  • ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅಂಗೀಕಾರ
  • ಲೋಕಸಭಾ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
Farm Laws Repeal Bill 2021: ಪ್ರತಿಪಕ್ಷಗಳ ಗದ್ದಲದ ನಡುವೆಯೂ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅಂಗೀಕಾರ title=
Farm Laws Repeal Bill 2021 (File Photo)

ನವದೆಹಲಿ: Farm Laws Repeal Bill 2021 - ಸಂಸತ್ತಿನ ಚಳಿಗಾಲದ ಅಧಿವೇಶನದ (Winter Session) ಮೊದಲ ದಿನವಾದ ಸೋಮವಾರ ಲೋಕಸಭೆಯು(Lok Sabha)  'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅನ್ನು ಅಂಗೀಕರಿಸಿತು.

ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ (Winter Session Of Parliament) ಆರಂಭವಾದ ಬೆನ್ನಲ್ಲೇ, ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. 

ಕೆಳಮನೆ ಪುನರಾರಂಭವಾದ ನಂತರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು 'ಕೃಷಿ ಕಾನೂನುಗಳ (Farm Laws) ರದ್ದತಿ ಮಸೂದೆ-2021' ಅನ್ನು ಮಂಡಿಸಿದರು. ನಂತರ ಪ್ರತಿಪಕ್ಷಗಳ ಸಂಸದರ ಗದ್ದಲದ ನಡುವೆ ಮಸೂದೆಯನ್ನು ಸದನದಲ್ಲಿ ಅಂಗೀಕರಿಸಲಾಯಿತು.

ಲೋಕಸಭೆಯಲ್ಲಿ ಕಾಂಗ್ರೆಸ್ (Congress Party) ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Choudhary) ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.  ವಿರೋಧ ಪಕ್ಷಗಳ ಸಂಸದರು ಚರ್ಚೆಗೆ ಅವಕಾಶ ಕೇಳಿ ಪಟ್ಟು ಹಿಡಿದರು. ಈ ಗಲಾಟೆಯ ನಡುವೆಯೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಕೃಷಿ ಕಾನೂನುಗಳ ರದ್ದತಿ ಮಸೂದೆ 'ಯನ್ನು ಮಂಡಿಸಿದ್ದು, ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದೆ.

ವಿಧೇಯಕ ಅಂಗೀಕಾರದ ನಂತರ, ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮತ್ತೆ ಮುಂದೂಡಲಾಯಿತು.

ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಇಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ-ATM New Rule: ATMಗಳಿಂದ ಕ್ಯಾಶ್ ಹಿಂಪಡೆಯುವ ನಿಯಮಗಳಲ್ಲಿ ಬದಲಾವಣೆ, ನೀವೂ ತಿಳಿದುಕೊಳ್ಳಿ

ನವೆಂಬರ್ 19 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಗುರುನಾನಕ್ ಜಯಂತಿಯ ದಿನದಂದು ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ಕಳೆದ ವಾರ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಇದನ್ನೂ ಓದಿ-First photo of Omicron:ಡೆಲ್ಟಾಕ್ಕಿಂತ ಹೆಚ್ಚು ರೂಪಾಂತರಗೊಂಡ ವೈರಸ್ ಹೀಗಿದೆ ನೋಡಿ..

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 23 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ-ಟೆನ್ಶನ್ ಹೆಚ್ಚಿಸಿದ Omicron ರೂಪಾಂತರಿ! ದಕ್ಷಿಣ ಆಫ್ರಿಕಾದಿಂದ ಮರಳಿದ ವ್ಯಕ್ತಿ ಕೊರೊನಾ ಪಾಸಿಟಿವ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News