ನವದೆಹಲಿ: ದೇಶಾದ್ಯಂತ ಕೊರೊನಾ ವೈರಸ್ ಪ್ರಸಾರವನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಘೋಷಿಸಿದೆ. ಈ ಲಾಕ್ ಡೌನ್ ಅನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಈಗಾಗಲೇ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇನ್ನೊಂದೆಡೆ ದೇಶದ ಹಲವು ರಾಜ್ಯಗಳು ಈಗಾಗಲೇ ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುದುವರೆಸುವ ನಿರ್ಣಯ ಕೈಗೊಂಡಿವೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯ ರಾಜ್ಯ ಸರ್ಕಾರಗಳು ಮದ್ಯದಂಗಡಿಗಳನ್ನು ತೆರೆಯುವುದಾಗಿ ಘೋಷಿಸಿವೆ. ಒಂದೆಡೆ ಅಸ್ಸಾಂ ಸರ್ಕಾರ ವಾರದ ಏಳೂ ದಿನಗಳಿಗೋಸ್ಕರ ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿದ್ದಾರೆ, ಮೇಘಾಲಯ ಸರ್ಕಾರ ಕೇವಲ ಶುಕ್ರವಾರ ಮಾತ್ರ ಅಂಗಡಿ ತೆರೆಯಲು ನಿರ್ಧರಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ರಾಜ್ಯ ಸರ್ಕಾರಗಳು ಮದ್ಯದಂಗಡಿಗಳಲ್ಲಿಯೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಕುರಿತು ಕಾಳಜಿ ವಹಿಸಲಾಗುವುದು ಎಂದು ಹೇಳಿವೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಸ್ಸಾಂ ಸರ್ಕಾರದ ಹಿರಿಯ ಅಧಿಕಾರಿಗಳು, ಜನರ ಬೇಡಿಕೆಯನ್ನು ಪರಿಗಣಿಸಿ ಅಸ್ಸಾಂ ಸರ್ಕಾರ ಈ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಎಲ್ಲ ವೈನ್ ಶಾಪ್ ಗಳಲ್ಲಿ ಸೋಶಿಯಲ್ ಡಿಸ್ಟನ್ಸಿಂಗ್ ಕುರಿತಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನಗಳನ್ನು ನೀಡಲಾಗಿದ್ದು, ವಾರದ ಏಳೂ ದಿನಗಳ ಕಾಲ ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರಾಯಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಅತ್ತ ಮೇಘಾಲಯ ಸರ್ಕಾರ ಮದ್ಯದಂಗಡಿಗಳನ್ನು ತೆರೆಯುವುದರ ಜೊತೆಗೆ ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಹೋಮ್ ಡಿಲೆವರಿ ಮೂಲಕ ಸಾರಾಯಿ ತಲುಪಿಸುವ ಸೌಲಭ್ಯ ಕೂಡ ಒದಗಿಸುವುದಾಗಿ ಹೇಳಿಕೊಂಡಿದೆ. ಭಾರತದಲ್ಲಿ ಸದ್ಯ ಕೊರೊನಾ ವೈರಸ್ ಪ್ರಕೊಪದಿಂದ ಸುಮಾರು 308 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 9152 ಜನ ಈ ಮಾರಕ ವೈರಸ್ ಗೆ ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ ಒಟ್ಟು 7,987 ಆಕ್ಟಿವ್ ಪ್ರಕರಣಗಳಾಗಿದ್ದರೆ, 856 ಜನ ಈ ಕಾಯಿಲೆಯಿಂದ ಗುಣಮುಖರಾಗಿ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ.
ದೇಶಾದ್ಯಂತ ವ್ಯಾಪಕವಾಗಿ ಪಸರಿಸುತ್ತಿರುವ ಕೊರೊನಾ ವೈರಸ್ ಪ್ರಕೋಪದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 24ರಿಂದ 21 ದಿನಗಳ ಲಾಕ್ ಡೌನ್ ಘೋಷಿಸಿದ್ದಾರೆ. ಈ ಅವಧಿ ಏಪ್ರಿಲ್ 14ರಂದು ಮುಕ್ತಾಯಗೊಳ್ಳಲಿದೆ. ಆದರೆ ಸದ್ಯದ ಪರಿಸ್ಥಿತಿಯ ಹಿನ್ನೆಲೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರೆಸುವ ಯೋಚನೆ ನಡೆಸುತ್ತಿದ್ದಾರೆ. ಹೀಗಾಗಿ ಏಪ್ರಿಲ್ 30ರವರೆಗೆ ದೇಶಾದ್ಯಂತ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.